Advertisement
ಅವರು ಹೆಬ್ರಿ ಚೆ„ತನ್ಯ ಯುವ ವೃಂದದ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಮರಳು ಲೋಡಿಗೆ ಒಂದು ಲಕ್ಷದಂತೆ ಬೆಂಗಳೂರಿಗೆ ಹೋಗುತ್ತಿತ್ತು. ನಮ್ಮ ಜಿಲ್ಲೆಯ ಮರಳು ನಮ್ಮ ಜಿಲ್ಲೆಗೆ ದೊರೆಯಬೇಕು ಎಂದುಕಾನೂನು ತಂದು ನಮ್ಮ ಜನರಿಗೆ ಮರಳು ದೊರೆಯುವಂತೆ ಮಾಡಿದೆ.
ಕೇಂದ್ರ ಅರಣ್ಯ ಪರಿಸರ ಸಚಿವರಾದ ಪ್ರಕಾಶ್ ಜಾವಡೇಕರ್ ಕುದುರೆಮುಖ ಸೇರಿ ದೇಶದಲ್ಲಿ 45 ಹುಲಿ ಯೋಜನೆ ಜಾರಿಗೊಳಿಸುವಾಗ ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಮೌನವಾಗಿದ್ದರಿಂದ ಹುಲಿ ಯೋಜನೆ ಜಾರಿಯಾಗಿದೆ, ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನ ಆಗಬಾರದು ಎಂದು ಮೂರು ಸಲ ಕೇಂದ್ರ ಸರಕಾರಕ್ಕೆ ರಾಜ್ಯ ಸರ್ಕಾರ ವರದಿ ನೀಡಿದ್ದರೂ ಕೇಂದ್ರ ನಮ್ಮ ವರದಿಗೆ ಕಿವಿಗೊಡುತ್ತಿಲ್ಲ, ಪರಿಣಾಮ ಕಸ್ತೂರಿ ರಂಗನ್ ವರದಿ ಜಾರಿಯ ತೂಗುಕತ್ತಿ ನಮ್ಮ ಮೇಲಿದೆ ಎಂದು ಕಾರ್ಕಳದ ಮಾಜಿ ಶಾಸಕರಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗೋಪಾಲ ಭಂಡಾರಿ ಹೇಳಿದರು.
Related Articles
Advertisement
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಯೋಗೀಶ್ ಶೆಟ್ಟಿ ಕೆಪಿಸಿಸಿ ಕಾರ್ಯದರ್ಶಿ ಭರತ್ ಮುಂಡೋಡಿ, ನೀರೆ ಕೃಷ್ಣ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತ ಲಕ್ಷ್ಮಣ್, ಪಕ್ಷದ ಪ್ರಮುಖರಾದ ಎಚ್.ಶೀನಾ ಪೂಜಾರಿ, ರಾಘವ ದೇವಾಡಿಗ, ಜೆಡಿಎಸ್ ಕಾರ್ಕಳ ಕ್ಷೇತ್ರದ ಕಾರ್ಯಾಧ್ಯಕ್ಷ ಹೆಬ್ರಿ ಶ್ರೀಕಾಂತ್ ಪೂಜಾರಿ ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮುದ್ರಾಡಿ ಸಂತೋಷ ಕುಮಾರ್ ಶೆಟ್ಟಿ ನಿರೂಪಿಸಿ ಜನಾರ್ದನ್ ವಂದಿಸಿದರು.