ಹುಬ್ಬಳ್ಳಿ: ಕಾಮನ್‌ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಶನ್ 10ನೇ ಸಮ್ಮೇಳನವನ್ನು ಕರ್ನಾಟಕದಲ್ಲಿ ನಡೆಸುವಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಕಾಮನ್ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಶನ್ ಅಧ್ಯಕ್ಷ ಬ್ರಿಟನ್‌ನ ಇಯಾನ್ ಲಿಡ್ಡೆಲ್ ಗ್ರಾಂಗರ್ ಅವರಿಗೆ ಮನವಿ ಸಲ್ಲಿಸಿದರು.
ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ 9ನೇ ಕಾಮನ್ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಶನ್‌ನಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನ ಸಭಾದ್ಯಕ್ಷ ಯು.ಟಿ.ಖಾದರ್ ಭಾಗಿಯಾಗಿದ್ದು, ಈ ಸಂದರ್ಭದಲ್ಲಿ ಇಯಾನ್ ಲಿಡ್ಡೆಲ್ ಗ್ರಾಂಗರ್ ಅವರನ್ನು ಭೇಟಿ ಮಾಡಿದ ಉಭಯ ಪೀಠಾಧ್ಯಕ್ಷರು ಕರ್ನಾಟಕ ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಇತಿಹಾಸ ವಿವರಿಸಿದರು. ಕರ್ನಾಟಕ ವಿಧಾನ ಪರಿಷತ್‌ಗೆ 104 ವರ್ಷಗಳ ಇತಿಹಾಸವಿದೆ.
ಕರ್ನಾಟಕದಲ್ಲಿ 10ನೇ ಕಾಮನ್ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಶನ್ ಸಮಾವೇಶಕ್ಕೆ ಮುಂದಾದರೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ರಾಷ್ಟ್ರೀಯ ಕಾಮನ್ವೆಲ್ತ್ ಅಸೋಸಿಯೇಶನ್ ಅಧ್ಯಕ್ಷ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಉಪಸ್ಥಿತಿಯಲ್ಲಿ ನಡೆಯುವ ಮಂಡಳಿ ಸಭೆಯಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಲಿಯಾನ್ ಲಿಡ್ಡೆಲ್ ಗ್ರಾಂಗರ್ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ, ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ, ಸಭಾಪತಿಗಳ ಆಪ್ತ ಕಾರ್ಯದರ್ಶಿ ಕೆ.ಡಿ.ಶೈಲಾ ಜತೆಗಿದ್ದರು ಎಂದು ವಿಧಾನ ಪರಿಷತ್ ಸಭಾಪತಿಯವರ ಕಚೇರಿ ಪ್ರಕಟನೆ ತಿಳಿಸಿದೆ.