ಬೆಂಗಳೂರು: IAM ವಂಚನೆ ಪ್ರಕರಣದಲ್ಲಿ ಲಂಚ ಪಡೆದುಕೊಂಡ ಆರೋಪವನ್ನು ಎದುರಿಸುತ್ತಿದ್ದ ಐ.ಎ.ಎಸ್. ಅಧಿಕಾರಿ ಬಿ.ಎಂ. ವಿಜಯ್ ಶಂಕರ್ ಅವರು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಜಯ್ ಶಂಕರ್ ಅವರ ಮೃತದೇಹ ಜಯನಗರದ ಅವರ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
IAM ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಶಂಕರ್ ಅವರ ಮೇಲೆ ಲಂಚ ಪಡೆದುಕೊಂಡಿದ್ದ ಆರೋಪ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಅವರನ್ನು ಬಂಧಿಸಿತ್ತು ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಶಂಕರ್ ಅವರು ಜೈಲುವಾಸವನ್ನೂ ಅನುಭವಿಸಿದ್ದರು.
ಐ.ಎ.ಎಂ.ನಿಂದ 1.5 ಕೋಟಿ ರೂಪಾಯಿಗಳ ಲಂಚ ಪಡೆದುಕೊಂಡಿದ್ದ ಆರೋಪ ವಿಜಯ್ ಶಂಕರ್ ಅವರ ಮೇಲಿತ್ತು.
ವಿಜಯ್ ಶಂಕರ್ ಅವರು ಈ ಹಿಂದೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಇಂದು ಸಾಯಂಕಾಲ ಈ ಘಟನೆ ನಡೆದಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಮಾಹಿತಿ ಲಭಿಸುತ್ತಿರುವಂತೆಯೇ ತಿಲಕ್ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ವಿಜಯ್ ಶಂಕರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.