Advertisement

ಐಎಎಸ್ ಅಧಿಕಾರಿ ಅಕ್ರಂ ಪಾಷ ತಂಜಾವೂರಿನಲ್ಲಿ ಚುನಾವಣಾ ವೀಕ್ಷಕರಾಗಿ ನೇಮಕ

02:24 PM Mar 20, 2021 | Team Udayavani |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿ ಅಕ್ರಂ ಪಾಷ ಅವರನ್ನು ಕೇಂದ್ರದ ಚುನಾವಣಾ ಆಯೋಗ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ತಂಜಾವೂರು ಜಿಲ್ಲೆಯ ತಂಜಾವೂರು ಕ್ಷೇತ್ರದಲ್ಲಿ ಚುನಾವಣಾ ವೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Advertisement

ರಾಜ್ಯ ಅಲ್ಪಸಂಖ್ಯಾತರ ಇಲಾಖೆಯ ನಿರ್ದೇಶನಾಲಯದ ನಿರ್ದೇಶಕರಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದ ಐಎಎಸ್ ಅಧಿಕಾರಿ ಅಕ್ರಂಪಾಷ ಅವರು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿ ಬಳಿಕ ರಾಜ್ಯ ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈಗಾಗಲೇ ಹಿಮಾಚಲ್ ಪ್ರದೇಶ, ದೆಹಲಿ, ರಾಜಸ್ಥಾನ್, ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯದಲ್ಲಿ ಚುನಾವಣಾ ವೀಕ್ಷಕರಾಗಿ ಸೇವೆ ಸಲ್ಲಿಸಿ ಅನುಭವ ಹೊಂದಿರುವ ಅಕ್ರಂ ಪಾಷ ಅವರಿಗೆ ಕೇಂದ್ರದ ಚುನಾವಣಾ ಆಯೋಗ ತಮಿಳುನಾಡಿನ ವಿಧಾನಸಭೆಯ ಚುನಾವಣೆಗೆ ವೀಕ್ಷಕರಾಗಿ ನೇಮಕ ಮಾಡಿದ್ದು ಈ ಸಂಬಂಧ ಆಯೋಗದ ಅಧೀನ ಕಾರ್ಯದರ್ಶಿ ಎಸ್ ಘೋಷ್ ಆದೇಶ ಹೊರಡಿಸಿದ್ದಾರೆ.

ಚುನಾವಣೆಗಳಲ್ಲಿ ವೀಕ್ಷಕರಾಗಿ ಅನುಭವ ಹೊಂದಿರುವ ಐಎಎಸ್ ಅಧಿಕಾರಿ ಅಕ್ರಂ ಪಾಷ ಅವರು ಚುನಾವಣಾ ಆಯೋಗದ ಸೂಚನೆಯಂತೆ ವೀಕ್ಷಕರಾಗಿ ಜವಾಬ್ದಾರಿ ವಹಿಸಿಕೊಂಡು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಗಡಿ ಪ್ರದೇಶಗಳನ್ನು ಚೆಕ್ ಪೋಸ್ಟ್‍ಗಳನ್ನು ಸ್ಥಾಪಿಸಿ ಅನುಮಾನ ಬರುವ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next