Advertisement

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

11:15 PM Nov 15, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ತೆರಿಗೆ ನಿರ್ದೇಶಕಿಯಾಗಿದ್ದ ಐಎಎಸ್‌ ಅಧಿಕಾರಿ ಸಿ. ಶಿಖಾ ಅವರು ಕೇಂದ್ರ ಸೇವೆಗೆ ನಿಯುಕ್ತಿಗೊಂಡಿರುವುದರಿಂದ ರಾಜ್ಯ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಶಿಖಾ ಅವರು ನಿಯುಕ್ತರಾಗಿದ್ದು, ಕೇಂದ್ರ ಸೇವೆಗೆ ತೆರಳುವುದರಿಂದ ಕರ್ನಾಟಕ ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಅಂತೆಯೇ ವಾಣಿಜ್ಯ ತೆರಿಗೆಗಳು (ಜಾರಿ) ಹೆಚ್ಚುವರಿ ಆಯುಕ್ತರಾಗಿರುವ ಎಲ್‌. ಚಂದ್ರಶೇಖರ್‌ ನಾಯಕ್‌ ಅವರನ್ನು ಶಿಖಾ ಅವರಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಭಾರ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

Advertisement

ಇನ್ನು ಬಿಎಂಟಿಸಿ ನಿರ್ದೇಶಕ (ಭದ್ರತೆ ಮತ್ತು ವಿಚಕ್ಷಣ) ಬಿ. ಸದಾಶಿವ ಪ್ರಭು ಅವರನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕರಾಗಿ ವರ್ಗಾಯಿಸಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ (ಮಧ್ಯಾಹ್ನದ ಬಿಸಿಯೂಟ) ನಿರ್ದೇಶಕರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next