Advertisement

ಸ್ವಾತಂತ್ರ್ಯೋತ್ಸವ ಸಂದರ್ಭ ಉಗ್ರ ಕೃತ್ಯ?: ಕಟ್ಟುನಿಟ್ಟಿನ ಸೂಚನೆ ನೀಡಿದ ಗುಪ್ತಚರ ಇಲಾಖೆ

10:24 AM Aug 04, 2022 | Team Udayavani |

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಯ ಮೊದಲು ಲಷ್ಕರ್-ಎ-ತೈಬಾ (ಎಲ್ಇಟಿ), ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಇತರ ಉಗ್ರ ಗುಂಪುಗಳಿಂದ ಸಂಭವನೀಯ ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ದಳ ಎಚ್ಚರಿಕೆ ನೀಡಿದೆ.

Advertisement

ಎಲ್‌ಇಟಿ, ಜೆಎಂ ಮತ್ತು ಇತರ ಗುಂಪುಗಳಿಂದ ಬೆದರಿಕೆ ಇದೆ ಎಂದು ಐಬಿಯ 10 ಪುಟಗಳ ವರದಿ ಹೇಳಿದೆ. ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಕೆಂಪು ಕೋಟೆಯಲ್ಲಿ ಕಟ್ಟುನಿಟ್ಟಾದ ಪ್ರವೇಶ ನಿಯಮಗಳನ್ನು ಜಾರಿಗೆ ತರಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ವರದಿಯಲ್ಲಿ ಜಪಾನ್‌ ನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ದಾಳಿ ಮತ್ತು ಉದಯಪುರ ಮತ್ತು ಅಮರಾವತಿಯಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಲಾಗಿದೆ. ಗುಪ್ತಚರ ಇಲಾಖೆಯು ದೆಹಲಿ ಪೊಲೀಸರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಆಗಸ್ಟ್ 15 ರಂದು ಆಯಕಟ್ಟಿನ ಸ್ಥಳದಲ್ಲಿ ಕಟ್ಟುನಿಟ್ಟಾದ ಪ್ರವೇಶ ನಿಯಮಗಳನ್ನು ಜಾರಿಗೊಳಿಸಲು ದೆಹಲಿ ಪೊಲೀಸರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ:ಸಿಇಟಿ ಫ‌ಲಿತಾಂಶ ಪ್ರಕಟವಾದ ಅನಂತರವೂ ರ್‍ಯಾಂಕ್‌ ತಗಾದೆ… ಗೊಂದಲ ಏನು?

ಉದಯಪುರ ಮತ್ತು ಅಮರಾವತಿಯಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿ, ಗುಪ್ತಚರ ಸಂಸ್ಥೆಗಳು ಜನನಿಬಿಡ ಸ್ಥಳಗಳಲ್ಲಿ ತೀವ್ರಗಾಮಿ ಗುಂಪುಗಳು ಮತ್ತು ಅವರ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚಿಸಿವೆ.

Advertisement

ವರದಿಯ ಪ್ರಕಾರ, ಪಾಕ್ ಐಎಸ್ಐ ಜೈಶ್ ಮತ್ತು ಲಷ್ಕರ್ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಬೆಂಬಲ ನೀಡುವ ಮೂಲಕ ಭಯೋತ್ಪಾದಕ ದಾಳಿಗಳನ್ನು ಪ್ರಚೋದಿಸುತ್ತಿದೆ. ದೊಡ್ಡ ನಾಯಕರು ಮತ್ತು ಪ್ರಮುಖ ಸ್ಥಳಗಳನ್ನು ಗುರಿಯಾಗಿಸಲು ಜೆಎಂ ಮತ್ತು ಎಲ್ಇಟಿಗೆ ಸೂಚನೆ ನೀಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next