ದಿನದಿಂದ ದಿನಕ್ಕೆ ಹೊಸಬರ ಚಿತ್ರಗಳು ಸೆಟ್ಟೇರುತ್ತಲೇ ಇವೆ. ಈ ಮೂಲಕಕನ್ನಡ ಚಿತ್ರರಂಗ ಮತ್ತೆ ಟ್ರ್ಯಾಕ್‌ಗೆ ಬರುತ್ತಿದೆ. ಸಾಕಷ್ಟು ಹೊಸಬರು ಸಿನಿಮಾದತ್ತ ಬರುತ್ತಿದ್ದಾರೆ. ಈ ಸಾಲಿಗೆ “ಇಬ್ಬರ ನಡುವಿನ ಮುದ್ದಿನ ರಾಣಿ’ ಚಿತ್ರವೂ ಒಂದು. ಇತ್ತೀಚೆಗೆ ಈ ಚಿತ್ರಕ್ಕೆ ಮುಹೂರ್ತ ನಡೆಯಿತು.ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.
ಸೂರಜ್ ಪ್ರೊಡಕ್ಷನ್ಸ್‌ನಡಿ ಸೌರಭ್ ಕಿಶೋರ್‌ಈ ಚಿತ್ರ ನಿರ್ಮಿಸುತ್ತಿದ್ದಾರೆ. ಪಿ.ಎಂ. ಆರ್‌ಕೋಣ್ಣಾರೆಡ್ಡಿ ಈ ಚಿತ್ರದ ಸಹ ನಿರ್ಮಾಪಕರು. ರೊಮ್ಯಾಂಟಿಕ್ ಲವ್ ಸ್ಟೋರಿಆಧಾರಿತಕಥಾಹಂದರ ಹೊಂದಿರುವ ಈ ಚಿತ್ರವನ್ನು ಎಂ.ಎಸ್.ಎನ್ ರಾಜಾ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.
ಬೆಂಗಳೂರು, ದೊಡ್ಡಬಳ್ಳಾಪುರ, ಮಡಿಕೇರಿ ಮುಂತಾದಕಡೆ 15 ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಎಂ.ಎಂ.ಮೋಹನ್ ಸಂಗೀತ ನೀಡುತ್ತಿದ್ದಾರೆ. ಬಾಲು ಸುರೇಶ್ ಛಾಯಾಗ್ರಹಣ, ಸತ್ಯಬಾಬು ಸಂಕಲನ ಹಾಗೂಭೂಪತಿ ಯಾದಗಿರಿ ಅವರಕಲಾ ನಿರ್ದೇಶನ ಈ ಚಿತ್ರಕ್ಕಿದೆ. ನಿರ್ಮಾಪಕ ಸೌರಭ್ ಕಿಶೋರ್ ಅವರು ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಆಕಾಶ್ ಆರಾಧ್ಯ, ದಿವ್ಯ ರಾವ್, ರೂಪ ರಾಯಪ್ಪ, ಸಂಜನ ನಾಯ್ಡು, ಮಹೇಂದರ್, ವಿಕ್ಚರಿ ವಾಸು, ಶೇಷಗಿರಿ, ಅಂಜಲಿ, ಲೋರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕಸ್ತೂರಿ ಮಹಲ್ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಿರುಸು : ಹಿರಿಯ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ “ಕಸ್ತೂರಿ ಮಹಲ್’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಪೋಸ್ಟ್ ಪ್ರೊಡಕ್ಷನ್‌ಕೆಲಸಗಳಿಗೆ ಚಾಲನೆ ನೀಡಿದೆ.
“ಕಸ್ತೂರಿ ಮಹಲ್’ ಚಿತ್ರದಲ್ಲಿ ಶಾನ್ವಿಶ್ರೀವಾಸ್ತವ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಉಳಿದಂತೆ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್, ಅಕ್ಷರ್‌ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಕೊಟ್ಟಿಗೆ ಹಾರ, ಬಾಲೂರು ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಸುಮಾರು20 ದಿನಗಳಕಾಲ ಒಂದೇ ಹಂತದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಸಂಕಲನವಿದೆ. ಹಾರರ್- ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ ಇದಾಗಿದ್ದು, “ಶ್ರೀಭವಾನಿ ಆರ್ಟ್ಸ್’ ಲಾಂಛನದಲ್ಲಿ ರವೀಶ್ ಆರ್.ಸಿ ಈ ಚಿತ್ರ ನಿರ್ಮಿಸುತ್ತಿದ್ದಾರೆ.