Advertisement

IBPS ಪರೀಕ್ಷೆ: ರಾಜ್ಯಾದ್ಯಂತ ಭಾರಿ ಪ್ರತಿಭಟನೆ;ಚೆಲ್ಲಿದ ರಕ್ತ 

03:27 PM Sep 09, 2017 | |

ಬೆಂಗಳೂರು : ಐಬಿಪಿಎಸ್‌ ಆರ್‌ಆರ್‌ಬಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿ  ಶನಿವಾರ ರಾಜ್ಯಾದ್ಯಂತ ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಪರೀಕ್ಷಾರ್ಥಿಯೊಬ್ಬ ಕೈ ಕೊಯ್ದುಕೊಂಡು ಉಗ್ರ ಪ್ರತಿಭಟನೆ ನಡೆಸಿದ್ದಾನೆ.

Advertisement

ಬೆಂಗಳೂರು, ಶಿವಮೊಗ್ಗ , ಚಿತ್ರದುರ್ಗ, ಕಲಬುರಗಿ, ಮೈಸೂರು, ದಾವಣಗೆರೆ, ಧಾರವಾಡದಲ್ಲಿ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಬಳಿ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿಯ ಖಾಸಗಿ ಕಾಲೇಜು ಎದುರು ನೂರಾರು ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿದ್ದು ಈ ವೇಳೆ ಸಲೀಂ ಎಂಬಾತ ಕೈಕೊಯ್ದುಕೊಂಡಿದ್ದಾನೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕನ್ನಡಿಗರನ್ನು ಕಡೆಗಣಿಸಿ ಹೊರ ರಾಜ್ಯದವರಿಗೆ ಮಣೆ ಹಾಕಲಾಗುತ್ತಿದೆ. ಇದರಲ್ಲಿ ಲಾಬಿ ಇದೆ. ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಇಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next