ಸಲ್ಲಿಸಲು ಕೊನೆಯ ದಿನವಾಗಿದ್ದ ಸೋಮವಾರ ಬೆಳಿಗ್ಗೆ ಇಬ್ರಾಹಿಂ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಚುನಾವಣಾಧಿಕಾರಿಯಾಗಿದ್ದ ವಿಧಾನಸಭೆ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು.
Advertisement
ಸಂಖ್ಯಾಬಲ ಇಲ್ಲದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲುನಿರ್ಧರಿಸಿದವು. ಆ.24 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿರುವುದರಿಂದ ಅಂದು ಸಂಜೆಯೇ ಇಬ್ರಾಹಿಂ ಆಯ್ಕೆಯ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ.ಆಗಸ್ಟ್ 31ಕ್ಕೆ ಚುನಾವಣೆ ನಿಗದಿಯಾಗಿತ್ತು. ಆದರೆ, ಒಬ್ಬರೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆಯಾಗಲಿದೆ. ಇಬ್ರಾಹಿಂ ಆಯ್ಕೆಯಾದರೆ 2018ರ ಜೂನ್
ವರೆಗೆ ಅವಧಿ ಇರುತ್ತದೆ.ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಸಿ.ಎಂ.ಇಬ್ರಾಹಿಂ, ಹೈಕಮಾಂಡ್, ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಮ್ಮನ್ನು ಗುರುತಿಸಿ ಜವಾಬ್ದಾರಿ ನೀಡುತ್ತಿದ್ದಾರೆ. ನನಗೆ ಪರಿಷತ್ ಸ್ಥಾನ ಕೊಟ್ಟಿರುವುದೇ ಹೆಚ್ಚು ಎಂದು ಸಿಎಂ ಹೇಳಿರುವುದರಲ್ಲಿ ಸತ್ಯ ಇದೆ. ನಾನು ಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ಕಾಂಗ್ರೆಸ್‌ನವರು ನನಗೆ ಈಗ ಮದುವೆ ಮಾಡಿದ್ದಾರೆ. ಮುಂದಿನದನ್ನು ನಾನು ಮಾಡಿಕೊಳ್ಳುತ್ತೇನೆ ಎಂದು ಮಾರ್ಮಿಕವಾಗಿ ಮಾತನಾಡಿದರು.