Advertisement
ವಿರಾಟ್ ಕೊಹ್ಲಿ ಐಸಿಸಿ ವರ್ಷದ ಕ್ರಿಕೆಟಿಗರಿಗೆ ನೀಡುವ “ಸರ್ ಗ್ಯಾರಿಫೀಲ್ಡ್ ಸೋಬರ್ಸ್ ಪ್ರಶಸ್ತಿ’, ಟೆಸ್ಟ್, ಏಕದಿನ ಕ್ರಿಕೆಟಿಗ ಪ್ರಶಸ್ತಿ ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಐಸಿಸಿ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕರಾಗಿಯೂ ಆಯ್ಕೆಯಾಗಿದ್ದಾರೆ. ಕಳೆದ ವರ್ಷವೂ ಕೊಹ್ಲಿ ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ ಪಡೆದಿದ್ದರು.
ಭಾರತ ಟೆಸ್ಟ್ ತಂಡದಲ್ಲಿ ವಿಕೆಟ್ ಕೀಪರ್ ಆಗಿರುವ ರಿಷಬ್ ಪಂತ್ ಐಸಿಸಿ ವರ್ಷದ ಉದಯೋನ್ಮುಖ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. ಕೆಲವೇ ತಿಂಗಳ ಹಿಂದೆ ಅವರು ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದರೂ ಉತ್ತಮ ಸಾಧನೆ ಮಾಡಿದ್ದರು. ವಿಕೆಟ್ ಕೀಪರ್ ಜವಾಬ್ದಾರಿ ಯನ್ನು ಉತ್ತಮವಾಗಿ ನಿಭಾಯಿಸಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ನೆಲದಲ್ಲಿ ಬ್ಯಾಟಿಂಗ್‌ನಲ್ಲೂ ಮಿಂಚಿದ್ದಾರೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯದಲ್ಲಿ ಟೆಸ್ಟ್ ಶತಕ ಬಾರಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಎಂಬ ವಿಷಯವನ್ನು ಇಲ್ಲಿ ನಾವು ನೆನಪಿಸಿಕೊಳ್ಳಬೇಕು.