ಪಂದ್ಯಾವಳಿ 2025ರ ಫೆ. 19ರಿಂದ ಮಾರ್ಚ್ 9ರ ತನಕ ನಡೆಯಲಿದೆ. ಮಾ. 9ರ ಫೈನಲ್‌ಗೆ ಮಾ. 10 ಮೀಸಲು ದಿನವಾಗಿದೆ.
ಟಿ20 ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಬ್ರಿಜ್‌ಟೌನ್‌ಗೆ ಆಗಮಿಸಿದ ವೇಳೆ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಚಾಂಪಿಯನ್ಸ್ ಟ್ರೋಫಿ ಟೂರ್ನಿಯ 15 ಪಂದ್ಯಗಳ ತಾತ್ಕಾಲಿಕ ವೇಳಾ ಪಟ್ಟಿಯೊಂದನ್ನು ತಂದಿದ್ದರು.
3 ತಾಣಗಳಲ್ಲಿ ಪಂದ್ಯಗಳು
ಪಾಕಿಸ್ಥಾನದ 3 ತಾಣಗಳಲ್ಲಿ ಪಂದ್ಯಾವಳಿ ನಡೆಯಲಿದೆ. ಲಾಹೋರ್‌ನಲ್ಲಿ 7, ರಾವಲ್ಪಿಂಡಿಯಲ್ಲಿ 5 ಮತ್ತು ಕರಾಚಿಯಲ್ಲಿ 3 ಪಂದ್ಯಗಳನ್ನು ಆಡಲಾಗುವುದು. ಕರಾಚಿಯಲ್ಲಿ ಉದ್ಘಾಟನಾ ಪಂದ್ಯ ಹಾಗೂ ಒಂದು ಸೆಮಿಫೈನಲ್, ರಾವಲ್ಪಿಂಡಿಯಲ್ಲಿ ಇನ್ನೊಂದು ಸೆಮಿಫೈನಲ್, ಲಾಹೋರ್‌ನಲ್ಲಿ ಫೈನಲ್ ನಡೆಯಲಿದೆ. ಒಂದು ವೇಳೆ ಭಾರತ ಸೆಮಿಫೈನಲ್ ಪ್ರವೇಶಿಸಿದರೆ ಆ ಪಂದ್ಯವನ್ನು ಲಾಹೋರ್‌ನಲ್ಲಿ ಆಡಲಾಗುವುದು.
Advertisement