Advertisement

ICC: ಪಾಕಿಸ್ತಾನದ ಕೈತಪ್ಪಿದ ಚಾಂಪಿಯನ್ಸ್‌ ಟ್ರೋಫಿ ಆಯೋಜನೆ: ಬದಲಿ ದೇಶದ ಆಯ್ಕೆ

04:42 PM Nov 12, 2024 | Team Udayavani |

ಮುಂಬೈ: 2025ರ ಫೆಬ್ರವರಿಯಲ್ಲಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (ICC Champions Trophy) ಕೂಟ ನಡೆಯಲಿದೆ. ಈ ಬಾರಿ ಏಕದಿನ ಮಾದರಿಯಲ್ಲಿ ನಡೆಯಲಿರುವ ಚಾಂಪಿತಯನ್ಸ್‌ ಟ್ರೋಫಿ ಕೂಟವು ಪಾಕಿಸ್ತಾನದಲ್ಲಿ ಆಯೋಜನೆ ಆಗುವುದೆಂದು ನಿಶ್ಚಯವಾಗಿತ್ತು. ಆದರೆ ಭಾರತವು ಪಾಕಿಸ್ತಾನಕ್ಕೆ ತೆರಳದ ಕಾರಣ ಸಂಪೂರ್ಣ ಪಾಕ್‌ ನೆಲದಲ್ಲಿ ನಡೆಯದು ಎನ್ನಲಾಗಿತ್ತು. ಭಾರತದ ಪಂದ್ಯಗಳನ್ನು ದುಬೈ ನಲ್ಲಿ ನಡೆಸಿ ಹೈಬ್ರಿಡ್‌ ಮಾದರಿಯಲ್ಲಿ ಕೂಟ ನಡೆಸಲು ಐಸಿಸಿ ಯೋಜನೆ ಹಾಕಿಕೊಂಡಿತ್ತು.

Advertisement

ಆದರೆ ಇದಕ್ಕೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸುತ್ತಿದೆ. ಭಾರತವು ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿದ ಕಾರಣಕ್ಕೆ ಕೂಟವನ್ನು ಆಯೋಜಿಸದೆ ಇರಲು ಪಾಕಿಸ್ತಾನ ಸರ್ಕಾರ ಮುಂದಾಗಿದೆ ಎಂದು ವರದಿ ಹೇಳಿದೆ.

ಚಾಂಪಿಯನ್ಸ್‌ ಟ್ರೋಪಿಯು ಫೆಬ್ರವರಿ 19ರಿಂದ ಮಾರ್ಚ್‌ 9ರವರೆಗೆ ನಡೆಯಲಿದೆ. ಭಾರತವು ತನ್ನ ನಿರ್ಧಾರವನ್ನು ಐಸಿಸಿಗೆ ತಿಳಿಸಿತ್ತು. ಐಸಿಸಿ ಈ ಮಾಹಿತಿಯನ್ನು ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ಗೆ ತಿಳಿಸಿತ್ತು.

ಡಾನ್‌ ಪತ್ರಿಕೆಯ ವರದಿಯ ಪ್ರಕಾರ, ಪಿಸಿಬಿ ಅಧ್ಯಕ್ಷ ಮೊಹ್ಸಿನ್‌ ನಖ್ವಿ ಅವರು ಹೈಬ್ರಿಡ್‌ ಮಾದರಿಯನ್ನು ಒಪ್ಪಲು ನಿರಾಕರಿಸಿದ್ದಾರೆ. ಹೀಗಾಗಿ ಇದೀಗ ಐಸಿಸಿ ಸಂಪೂರ್ಣ ಕೂಟವನ್ನೇ ಪಾಕಿಸ್ತಾನದಿಂದ ಸ್ಥಳಾಂತರ ಮಾಡಲು ಯೋಚಿಸುತ್ತಿದೆ. ಇದು ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯಲು ಕಾರಣವಾಗಬಹುದು.

Advertisement

ಒಂದು ವೇಳೆ ಪಾಕಿಸ್ತಾನದಲ್ಲಿ ಆಯೋಜನೆ ನಡೆಯದಿದ್ದರೆ ಕೂಟದಲ್ಲಿ ಪಾಕಿಸ್ತಾನ ತಂಡವು ಆಡದೆ ಇರುವ ಸಾಧ್ಯೆತೆಯಿದೆ. ಪಿಸಿಬಿ ಗೆ ಪಾಕಿಸ್ತಾನ ಸರ್ಕಾರ ಈ ಬಗ್ಗೆ ಸೂಚನೆ ನೀಡಬಹುದು ಎಂದು ವರದಿ ಹೇಳಿದೆ.

ದ.ಆಫ್ರಿಕಾದಲ್ಲಿ ಕೂಟ

ಒಂದು ವೇಳೆ ಪಾಕಿಸ್ತಾನದಲ್ಲಿ ಚಾಂಪಿಯನ್ಸ್‌ ಟ್ರೋಫಿ ನಡೆಯದಿದ್ದರೆ, ದಕ್ಷಿಣ ಆಫ್ರಿಕಾದಲ್ಲಿ ನಡೆಯಬಹುದು ಎನ್ನುತ್ತಿದೆ ವರದಿ. ದಕ್ಷಿಣ ಆಫ್ರಿಕಾದಲ್ಲಿ ಚಾಂಪಿಯನ್ಸ್‌ ಟ್ರೋಫಿ ನಡೆಸಲು ಐಸಿಸಿ ಯೋಚಿಸುತ್ತಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next