Advertisement

World Cup;ಭಾರತದ ಬೌಲಿಂಗ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾಕ್ಕೆ ಹೀನಾಯ ಸೋಲು

08:41 PM Nov 05, 2023 | Team Udayavani |

ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾ ತಂಡವು ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ದಾಳಿಯ ಎದುರು ಮಂಕಾಗಿ ಹೀನಾಯ ಸೋಲು ಕಂಡಿತು. ಗೆಲುವಿನೊಂದಿಗೆ ಭಾರತ ಅಗ್ರ ಸ್ಥಾನಿಯಾಗಿ ಸೆಮಿ ಫೈನಲ್ ಪ್ರವೇಶಿಸಲಿದೆ.

Advertisement

327 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾದ ಘಟಾನುಘಟಿ ಬ್ಯಾಟ್ಸ್ ಮ್ಯಾನ್ ಗಳು ಇಂದು ಭಾರತದ ಬೌಲಿಂಗ್ ದಾಳಿಗೆ ಸಿಲುಗಿ ಪತರು ಗುಟ್ಟಿ ಹೋದರು. 27.1 ಓವರ್ ಗಳಲ್ಲಿ ಕೇವಲ 83 ರನ್ ಗಳಿಗೆ ಆಲೌಟಾಗುವ ಮೂಲಕ ಭಾರತ 243 ರನ್‌ಗಳ ಅತ್ಯಮೋಘ ಸ್ಮರಣೀಯ ಜಯ ಸಾಧಿಸಿತು.

ಭಾರತದ ಪರ ವೇಗಿ ಸಿರಾಜ್ ಅವರು ಅದ್ಬುತ ಫಾರ್ಮ್ ನಲ್ಲಿದ್ದ ಡಿ’ಕಾಕ್ ಅವರನ್ನು ಬೌಲ್ಡ್ ಮಾಡುವ ಮೂಲಕ ಮೊದಲ ಆಘಾತ ನೀಡಿದರು. ಆಬಳಿಕ ದಕ್ಷಿಣ ಆಫ್ರಿಕಾ ಆಟಗಾರರು ತಲೆ ಎತ್ತಲು ಸಾಧ್ಯವಾಗಲಿಲ್ಲ.

ಭಾರತದ ಪರ ಬಿಗಿ ದಾಳಿ ನಡೆಸಿದ ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸಿದರು. ಶಮಿ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಕಿತ್ತರು.

ವಿರಾಟ್ ಕೊಹ್ಲಿ ಅವರು ಜನ್ಮದಿನದ ಸಂಭ್ರಮದಲ್ಲಿ ಅಮೋಘ ಶತಕ ಸಿಡಿಸಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಸರಿಗಟ್ಟಿದರು. ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿ ಭರ್ಜರಿ ಮೊತ್ತವನ್ನು ದಕ್ಷಿಣ ಆಫ್ರಿಕಾ ತಂಡದ ಎದುರಿಗಿಟ್ಟಿದೆ. ನಾಯಕ ರೋಹಿತ್ ಶರ್ಮ ಮತ್ತು ಶುಭಮನ್ ಗಿಲ್ 62 ರನ್ ಜತೆಯಾಟವಾಡಿ ವೇಗದ ಆರಂಭ ಒದಗಿಸಿಕೊಟ್ಟರು. ಶರ್ಮ 24 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು. ಗಿಲ್ 23 ರನ್ ಗಳಿಸಿದ್ದ ವೇಳೆ ನಿರ್ಗಮಿಸಿದರು.

Advertisement

ಆ ಬಳಿಕ ತಾಳ್ಮೆಯ ಆಟವಾಡಿದ ಕೊಹ್ಲಿ119 ಎಸೆತಗಳಲ್ಲಿ 100 ರನ್ ಗಳಿಸಿ ಸಂಭ್ರಮಿಸಿದರು. ಕೊಹ್ಲಿ ಅವರಿಗೆ ಉತ್ತಮ ಜತೆಯಾಟದ ಸಾಥ್ ನೀಡಿದ ಶ್ರೇಯಸ್ ಅಯ್ಯರ್ 87 ಎಸೆತಗಳಲ್ಲಿ 77 ರನ್ ಗಳಿಸಿ ಔಟಾದರು. ಕೆಎಲ್ ರಾಹುಲ್ 8 ರನ್, ಸೂರ್ಯಕುಮಾರ್ ಯಾದವ್ 22 ಗಳಿಸಿದ್ದ ವೇಳೆ ಔಟಾದರು.

ಕೊಹ್ಲಿ121 ಎಸೆತಗಳಲ್ಲಿ 101 ರನ್ ಗಳಿಸಿ ಅಜೇಯರಾಗಿ ಉಳಿದರು. ಕೊಹ್ಲಿ ಆಕರ್ಷಕ 10 ಬೌಂಡರಿಗಳನ್ನು ಬಾರಿಸಿದ್ದರು. ರವೀಂದ್ರ ಜಡೇಜಾ 15 ಎಸೆತಗಳಲ್ಲಿ 29 ರನ್ ಗಳಿಸಿ ಔಟಾಗದೆ ಉಳಿದರು.

ಸಚಿನ್ ತೆಂಡೂಲ್ಕರ್ 452 ಇನ್ನಿಂಗ್ಸ್ ಗಳಲ್ಲಿ 49 ಶತಕ ಬಾರಿಸಿದ್ದು,ವಿರಾಟ್ ಕೊಹ್ಲಿ ಅವರು 277 ಇನ್ನಿಂಗ್ಸ್ ಗಳಲ್ಲಿ 49 ನೇ ಶತಕ ದಾಖಲಿಸಿ ಹೊಸ ದಾಖಲೆಯತ್ತ ಮುನ್ನುಗ್ಗುತ್ತಿದ್ದಾರೆ.

8 ರಲ್ಲಿ 8 ಪಂದ್ಯಗಳನ್ನು ಗೆದ್ದಿರುವ ರೋಹಿತ್ ಶರ್ಮ ಬಳಗ ಸೆಮಿ ಫೈನಲ್ ಗೂ ಮುನ್ನ ನೆದರ್ ಲ್ಯಾಂಡ್ಸ್ ವಿರುದ್ಧ ಪಂದ್ಯವನ್ನು ಆಡಲಿದೆ. ದಕ್ಷಿಣ ಆಫ್ರಿಕಾ ತಂಡ ಅಫ್ಘಾನ್ ಎದುರು ಪಂದ್ಯ ಆಡಲಿದೆ.

Advertisement

Udayavani is now on Telegram. Click here to join our channel and stay updated with the latest news.

Next