ಲಕ್ನೋ: ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ತಂಡ ಇಂಗ್ಲೆಂಡ್ ಗೆ ಗೆಲ್ಲಲು 230 ರನ್ ಗಳ ಗುರಿ ನೀಡಿದೆ.
40 ರನ್ ಆಗುವಷ್ಟರಲ್ಲಿ 3 ಪ್ರಮುಖ ವಿಕೆಟ್ ಗಳನ್ನು ಕಳೆದು ಕೊಂಡಿತು. ಶುಭಮನ್ ಗಿಲ್ 9, ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಔಟಾದರೆ ಕೊಹ್ಲಿ ಶೂನ್ಯಕ್ಕೆ ಔಟಾಗಿ ನಿರಾಶರಾದರು.
ಭಾರತ ತಂಡದ ನಾಯಕನಾಗಿ ನೂರನೇ ಪಂದ್ಯವಾಡಿದ ರೋಹಿತ್ ಜವಾಬ್ದಾರಿಯುತ ಆಟವಾಡಿದರು. 87 ರನ್ ಗಳಿಸಿ ಔಟಾದರು. 101 ಎಸೆತಗಳಲ್ಲಿ 10 ಬೌಂಡರಿ ಮತ್ತು 3 ಸಿಕ್ಸರ್ ಗಳನ್ನು ಬಾರಿಸಿದರು.
ಕೆ ಎಲ್ ರಾಹುಲ್ 39 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಅವರು 49 ರನ್ ಗಳಿಸಿದ್ದ ವೇಳೆ ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚಿತ್ತು ನಿರ್ಗಮಿಸುವ ಮೂಲಕ ಅರ್ಧ ಶತಕ ವಂಚಿತರಾದರು. ಜಡೇಜಾ 8 ರನ್ , ಶಮಿ 1 ರನ್ ಗೆ ಔಟಾದರು. ಕೊನೆಯಲ್ಲಿ ಜಸ್ಪ್ರೀತ್ ಬುಮ್ರಾ ಕುಲದೀಪ್ ಯಾದವ್ ರನ್ ಗಳಿಸಿದರು. 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಲು ಶಕ್ತವಾಯಿತು.
ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಡೇವಿಡ್ ವಿಲ್ಲಿ 3 ವಿಕೆಟ್ ಕಿತ್ತು ಮಿಂಚಿದರು. ಕ್ರಿಸ್ ವೋಕ್ಸ್, ಆದಿಲ್ ರಶೀದ್ ತಲಾ 2 ವಿಕೆಟ್ ಪಡೆದರೆ, ಮಾರ್ಕ್ ವುಡ್ 1 ವಿಕೆಟ್ ಪಡೆದರು.