Advertisement

ICC Men’s ODI ; ಕೊಹ್ಲಿಗೆ ನಾಲ್ಕನೇ ಬಾರಿ ವರ್ಷದ ಕ್ರಿಕೆಟಿಗ ಪ್ರಶಸ್ತಿ

09:51 PM Jan 25, 2024 | Team Udayavani |

ದುಬೈ: ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 2023 ರ ವರ್ಷದ ಪುರುಷರ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ವರ್ಷ ತವರಿನಲ್ಲಿ ನಡೆದ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಈ ಸಾಧನೆಯನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಇದು ಕೊಹ್ಲಿ ಅವರು ನಾಲ್ಕನೇ ಬಾರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಕಳೆದ ವರ್ಷ ಏಕದಿನ ಕ್ರಿಕೆಟ್ ನಲ್ಲಿ ಶುಭಮನ್ ಗಿಲ್ ನಂತರ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಭಾರತ ತಂಡದ ಮಾಜಿ ನಾಯಕ ಕೊಹ್ಲಿ ಅವರು ಆರು ಶತಕಗಳು ಮತ್ತು ಎಂಟು ಅರ್ಧ ಶತಕಗಳನ್ನು ಒಳಗೊಂಡಂತೆ 1,377 ರನ್‌ಗಳೊಂದಿಗೆ ಅತ್ಯಮೋಘ ವರ್ಷವನ್ನು ಪೂರ್ಣಗೊಳಿಸಿದ್ದಾರೆ.

ಇದು ಕೊಹ್ಲಿ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿ ಗೆದ್ದ ಏಳನೇ ವೈಯಕ್ತಿಕ ಐಸಿಸಿ ಪ್ರಶಸ್ತಿಯಾಗಿದೆ. 2012, 2017 ಮತ್ತು 2018 ರಲ್ಲಿ ಏಕದಿನ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next