Advertisement
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು.
Related Articles
Advertisement
ಕೊನೆಯ ಓವರ್ ನಲ್ಲಿ ದಕ್ಷಿಣ ಆಫ್ರಿಕಾಕ್ಕೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಸಾಹಸಮಯ ಅಮೋಘ ಕ್ಯಾಚ್ ಪಡೆದರು.21 ರನ್ ಗಳಿಸಿದ್ದ ಮಿಲ್ಲರ್ ಪೆವಿಲಿಯನ್ ಗೆ ಮರಳಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು.ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು.ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. 8 ವಿಕೆಟ್ ನಷ್ಟಕ್ಕೆ 169 ರನ್ ಮಾತ್ರ ಗಳಿಸಿ ಸೋಲು ಅನುಭವಿಸಿತು.
ಬಿಗಿ ದಾಳಿ ನಡೆಸಿದ ಬುಮ್ರಾ ಪ್ರಮುಖ ಎರಡು ವಿಕೆಟ್ ಪಡೆದರು. ಕೊನೆಯ ಓವರ್ ನಿಯಂತ್ರಿಸಿ ಹಾರ್ದಿಕ್ ಪಾಂಡ್ಯಾ ಕೂಡ ಗೆಲುವಿನ ಹೀರೋ ಎನಿಸಿಕೊಂಡರು.
ಆಧಾರವಾದ ಕೊಹ್ಲಿ
ಸರಣಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಕೊಹ್ಲಿ 76(59 ಎಸೆತ) ರನ್ ಗಳಿಸಿ ಸಮಯೋಚಿತ ಆಟವಾಡಿದರು. 34 ಕ್ಕೆ 3 ಪ್ರಮುಖ ವಿಕೆಟ್ ಕಳೆದುಕೊಂಡು ಭಾರತ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ತಂಡಕ್ಕೆ ನೆರವಾದರು. ರೋಹಿತ್ ಶರ್ಮ 9, ಪಂತ್ ಶೂನ್ಯಕ್ಕೆ ಔಟಾದರೆ, ಸೂರ್ಯಕುಮಾರ್ ಯಾದವ್ 3 ರನ್ ಗೆ ಮರಳಿದರು. ಅಕ್ಷರ್ ಪಟೇಲ್ 47(31 ಎಸೆತ) ಗಳಿಸಿದ್ದ ವೇಳೆ ರನ್ ಔಟಾದರು. ಶಿವಂ ದುಬೆ 27(16 ಎಸೆತ) ಕೊಡುಗೆ ನೀಡಿದರು. ಹಾರ್ದಿಕ್ ಪಂದ್ಯ ಔಟಾಗದೆ 5 ರನ್ , ರವೀಂದ್ರ ಜಡೇಜ 2 ರನ್ ಗಳಿಸಿದರು.
ದಕ್ಷಿಣ ಆಫ್ರಿಕಾ ಪರ ನೋರ್ಟ್ಜೆ ಮತ್ತು ಕೇಶವ್ ಮಹಾರಾಜ್ ತಲಾ 2 ವಿಕೆಟ್ ಪಡೆದರು. ಮಾರ್ಕೊ ಜಾನ್ಸೆನ್ ಮತ್ತು ರಬಾಡಾ ತಲಾ 1 ವಿಕೆಟ್ ಪಡೆದರು.