Advertisement

ODI rankings: ಕುಸಿದ ಗಿಲ್, ಮತ್ತೆ ಅಗ್ರಸ್ಥಾನಕ್ಕೇರಿದ ಬಾಬರ್

07:34 PM Dec 20, 2023 | Team Udayavani |

ದುಬೈ: ಐಸಿಸಿ ಏಕದಿನ ರ‍್ಯಾಂಕಿಂಗ್ ನ ಬುಧವಾರ ಬಿಡುಗಡೆಯಾದ ಪಟ್ಟಿಯಲ್ಲಿ ಪಾಕಿಸ್ಥಾನ ತಂಡದ ಮಾಜಿ ನಾಯಕ ಬಾಬರ್ ಅಜಮ್ ಅವರು ಬ್ಯಾಟಿಂಗ್ ರ‍್ಯಾಂಕ್ ನಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದುದರಿಂದ ಅಗ್ರಸ್ಥಾನದಲ್ಲಿದ್ದ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಅಲ್ಪಕಾಲದಲ್ಲೇ ಕುಸಿತ ಕಂಡು ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ. ಟೆಸ್ಟ್, ಏಕದಿನ ಮತ್ತು ಟಿ 20 ಮೂರು ವಿಭಾಗಗಳಲ್ಲಿಯೂ ಭಾರತ ತಂಡ ಅಗ್ರ ಸ್ಥಾನದಲ್ಲೇ ಉಳಿದುಕೊಂಡಿದೆ.

Advertisement

ಕಳೆದ ತಿಂಗಳು ನಡೆದ ಏಕದಿನ ವಿಶ್ವಕಪ್‌ ವೇಳೆ ಗಿಲ್ ಅಗ್ರ ಸ್ಥಾನವನ್ನು ಅಲಂಕರಿಸಿದ್ದರು, ಆದರೆ ನಂತರ ಅವರು ಯಾವುದೇ ಏಕದಿನ ಪಂದ್ಯವಾಡಿಲ್ಲ. ಬಾಬರ್ 824 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಗಿಲ್ 810 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ 3 ಮತ್ತು 4ನೇ ಸ್ಥಾನದಲ್ಲಿದ್ದಾರೆ. ಶ್ರೇಯಸ್ ಅಯ್ಯರ್ 12ನೇ ಸ್ಥಾನಕ್ಕೆ ಕುಸಿದಿದ್ದಾರೆ. ಕೆಎಲ್ ರಾಹುಲ್ 16ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್ ಅಗ್ರಸ್ಥಾನದಲ್ಲೆ ಮುಂದುವರಿದಿದ್ದಾರೆ. ಆಸ್ಟ್ರೇಲಿಯದ ವೇಗಿ ಜೋಶ್ ಹೇಜಲ್‌ವುಡ್ ನಂತರದ ಸ್ಥಾನದಲ್ಲಿದ್ದು, ಭಾರತದ ವೇಗಿ ಮೊಹಮ್ಮದ್ ಸಿರಾಜ್ 3ನೇ ಸ್ಥಾನದಲ್ಲಿದ್ದಾರೆ. ಜಸ್ಪ್ರೀತ್ ಬುಮ್ರಾ 5ನೇ ಮತ್ತು ಕುಲದೀಪ್ ಯಾದವ್ (8ನೇ) ಅಗ್ರ 10ರಲ್ಲಿ ಕಾಣಿಸಿಕೊಂಡಿರುವ ಇತರ ಭಾರತೀಯ ಆಟಗಾರರಾಗಿದ್ದಾರೆ. ಮೊಹಮ್ಮದ್ ಶಮಿ 11ನೇ ಸ್ಥಾನ, ಸ್ಪಿನ್ನರ್ ರವೀಂದ್ರ ಜಡೇಜಾ 22ನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್‌ಗಳ ಪಟ್ಟಿ ಹೆಚ್ಚಿನ ಬದಲಾಗದೆ ಉಳಿದಿದ್ದು, ಬಾಂಗ್ಲಾದ ಶಕಿಬ್ ಅಲ್ ಹಸನ್ ಅಗ್ರ ಸ್ಥಾನದಲ್ಲಿದ್ದಾರೆ.ಜಡೇಜಾ 12ನೇ ಮತ್ತು ಹಾರ್ದಿಕ್ ಪಾಂಡ್ಯ 17ನೇ ಸ್ಥಾನದಲ್ಲಿದ್ದು ಅಗ್ರ 20ರಲ್ಲಿರುವ ಭಾರತೀಯ ಆಟಗಾರರಾಗಿದ್ದಾರೆ.

ಟಿ20 ಯಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು. ಆದಿಲ್ ರಶೀದ್ ಟಿ 20 ಬೌಲರ್‌ಗಳಲ್ಲಿ ಮೊದಲ ಸ್ಥಾನವನ್ನು ಹೊಂದಿದ್ದಾರೆ, ಗ್ರೇಮ್ ಸ್ವಾನ್ ನಂತರ ಈ ಜಾಗಕ್ಕೆ ಬಂದ ಎರಡನೇ ಇಂಗ್ಲಿಷ್ ಸ್ಪಿನ್ನರ್ ಆಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕು ಟಿ 20 ಪಂದ್ಯಗಳಲ್ಲಿ ಏಳು ವಿಕೆಟ್ ಕಬಳಿಸಿದ ರಶೀದ್, ಅಫ್ಘಾನಿಸ್ಥಾನದ ರಶೀದ್ ಖಾನ್ ಅವರನ್ನು ಒಂದು ಸ್ಥಾನ ಕೆಳಕ್ಕಿಳಿಸಿದ್ದಾರೆ. ರವಿ ಬಿಷ್ಣೋಯ್ 3ನೇ ಅಗ್ರ ಶ್ರೇಯಾಂಕದ ಭಾರತೀಯರಾಗಿದ್ದಾರೆ.

Advertisement

ಶಕೀಬ್ ಟಿ 20 ಆಲ್‌ರೌಂಡರ್‌ಗಳ ಪಟ್ಟಿಯಲ್ಲೂ ಅಗ್ರಸ್ಥಾನದಲ್ಲಿದ್ದು, ಪಾಂಡ್ಯ 4ನೇ ಅತ್ಯುನ್ನತ ಶ್ರೇಯಾಂಕದ ಭಾರತೀಯ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.

ನ್ಯೂಜಿ ಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಟೆಸ್ಟ್ ಬ್ಯಾಟ್ಸ್‌ಮ್ಯಾನ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಜೋ ರೂಟ್ (2) ಮತ್ತು ಸ್ಟೀವನ್ ಸ್ಮಿತ್ (3) ನಂತರದ ಸ್ಥಾನದಲ್ಲಿದ್ದಾರೆ.

ಪರ್ತ್‌ನಲ್ಲಿ ನಡೆದ ಪಾಕಿಸ್ಥಾನ ವಿರುದ್ಧದ ಆರಂಭಿಕ ಟೆಸ್ಟ್‌ನಲ್ಲಿ ಆಸ್ಟ್ರೇಲಿಯದ ಉಸ್ಮಾನ್ ಖ್ವಾಜಾ ಅಮೋಘ ಪ್ರದರ್ಶನ ನೀಡಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ರೋಹಿತ್ ಶರ್ಮ 10ನೇ ಶ್ರೇಯಾಂಕದಲ್ಲಿರುವ ಭಾರತೀಯ ಆಟಗಾರ.

ಭಾರತದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಕಗಿಸೊ ರಬಾಡ, ಶಕೀಬ್ ಮತ್ತು ಜಡೇಜಾ ನಂತರದ ಸ್ಥಾನದಲ್ಲಿದ್ದಾರೆ. ಆಸೀಸ್‌ ಆಟಗಾರರು ಪ್ರಗತಿ ಸಾಧಿಸಿದ್ದು, ನಾಯಕ ಪ್ಯಾಟ್ ಕಮ್ಮಿನ್ಸ್ ಮೂರನೇ ಸ್ಥಾನಕ್ಕೆ ಏರಿದ್ದಾರೆ, ನಂತರ ನಾಥನ್ ಲಿಯಾನ್ (5 ನೇ), ಮಿಚೆಲ್ ಸ್ಟಾರ್ಕ್ (8 ನೇ) ಮತ್ತು ಜೋಶ್ ಹ್ಯಾಜಲ್‌ವುಡ್ (10 ನೇ) ಪಾಕಿಸ್ಥಾನ ವಿರುದ್ಧ ಅವರ ಉತ್ತಮ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಜಡೇಜಾ ಅಗ್ರಸ್ಥಾನದಲ್ಲಿದ್ದರೆ, ಅಶ್ವಿನ್ ಎರಡನೇ ಸ್ಥಾನದಲ್ಲಿದ್ದು, ಅಕ್ಷರ್ ಪಟೇಲ್ ಐದನೇ ಸ್ಥಾನದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next