Advertisement

ಟಿ20 ರ‍್ಯಾಂಕಿಂಗ್ ಪ್ರಕಟ: ಟಾಪ್ ಟೆನ್ ನಲ್ಲಿ ಸ್ಥಾನಪಡೆದ ಕೊಹ್ಲಿ, ರಾಹುಲ್

04:26 PM Dec 09, 2020 | Mithun PG |

ನವದೆಹಲಿ: ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಮುಗಿದ ಬೆನ್ನಲ್ಲೆ, ರ‍್ಯಾಂಕಿಂಗ್ ಕೂಡ ಪ್ರಕಟವಾಗಿದ್ದು, ಟೀಂ ಇಂಡಿಯಾ ನಾಯಕ ಮತ್ತು ವಿಕೆಟ್ ಕೀಪರ್ ಕೆ.ಎಲ್ ರಾಹುಲ್ ಅಗ್ರ ಹತ್ತರಲ್ಲಿ ಸ್ಥಾನ ಕಾಯ್ದುಕೊಂಡಿದ್ದಾರೆ.

Advertisement

ಆಸೀಸ್ ವಿರುದ್ಧದ ಟಿ20 ಸರಣಿಯನ್ನು ಭಾರತ 2-1ರಿಂದ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ 44.66ರ ಸರಾಸರಿಯಲ್ಲಿ 134 ರನ್ ಗಳಿಸಿದ್ದರು. ಕೊನೆಯ ಪಂದ್ಯದಲ್ಲಿ ಭರ್ಜರಿ 85 ರನ್ ಬಾರಿಸಿದ್ದರು. ಕೆ.ಎಲ್ ರಾಹುಲ್ ಕೂಡ 3 ಪಂದ್ಯಗಳಲ್ಲಿ 81 ರನ್ ಗಳಿಸಿ ಒಟ್ಟಾರೆ 816 ಅಂಕ ಪಡೆದರು.

ಆ ಮೂಲಕ ಕೆ. ಎಲ್ ರಾಹುಲ್ ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದರೆ, ನಾಯಕ ವಿರಾಟ್ ಕೊಹ್ಲಿ 8ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಗಾಯಾಳುವಾಗಿರುವ ರೋಹಿತ್ ಶರ್ಮಾ, ಆಸ್ಟ್ರೇಲಿಯಾ ವಿರುದ್ದ ಪಂದ್ಯವಾಡದೇ ಇದ್ದುದ್ದರಿಂದ 14ನೇ ಸ್ಥಾನಕ್ಕೆ ಕುಸಿದಿದ್ದಾರೆ. ಶಿಖರ್ ಧವನ್ 19ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಉಳಿದಂತೆ ಇಂಗ್ಲೆಂಡ್ ಡೇವಿಡ್ ಮಲಾನ್ 915 ಅಂಕಗಳಿಂದ ಮೊದಲ ಸ್ಥಾನದಲ್ಲಿದ್ದರೆ, ಪಾಕ್ ಆಟಗಾರ ಬಾಬರ್ ಅಜಮ್ 871 ಅಂಕಗಳಿಂದ 2ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ:  ದಿನನಿತ್ಯ ಪ್ರತಿಭಟನೆ ನಡೆಸುವುದನ್ನು ಕೈಬಿಟ್ಟು ಚರ್ಚೆಗೆ ಬನ್ನಿ: ರೈತ ಮುಖಂಡರಿಗೆ ಸಿಎಂ ಮನವಿ

Advertisement

ಬೌಲಿಂಗ್ ವಿಭಾಗದಲ್ಲಿ 21 ವರ್ಷದ ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಅಗ್ರ 15ರಲ್ಲಿ ಕಾಣಿಸಿಕೊಂಡ ಏಕೈಕ ಭಾರತೀಯ ಬೌಲರ್. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೇವಲ 2 ವಿಕೆಟ್ ಪಡೆದರೂ ಪವರ್ ಪ್ಲೇ ಓವರ್ ನಲ್ಲಿ ಉತ್ತಮ ಬೌಲಿಂಗ್ ದಾಳಿ ನಡೆಸಿದ್ದರಿಂದ ರ್ಯಾಂಕಿಂಗ್ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.  ಜಸ್ಪ್ರೀತ್ ಬುಮ್ರಾ 17ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದನ್ನೂ ಓದಿ:   ಹಾಲಾಡಿ ಸೇತುವೆಗೆ ಕಾರು ಡಿಕ್ಕಿ : ಕೆಎಂಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಸಾವು

Advertisement

Udayavani is now on Telegram. Click here to join our channel and stay updated with the latest news.

Next