Advertisement

ಜುಲೈ 1 ರಿಂದ 14ರ ವರೆಗೆ ಐಸಿಎಸ್‌ಇ 10, 12ನೇ ತರಗತಿ ಪರೀಕ್ಷೆ

07:53 PM May 24, 2020 | mahesh |

ಐಸಿಎಸ್‌ಇನ 10, 12ನೇ ತರಗತಿಗಳ ಬಾಕಿ ಉಳಿದಿರುವ ವಿಷಯಗಳ ಪರೀಕ್ಷೆಯನ್ನು ಜುಲೈ 1ರಿಂದ 14ರವರೆಗೆ ನಡೆಸಲಿದೆ. ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. 12ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 2ರಿಂದ 12ರವರೆಗೆ ಪರೀಕ್ಷೆಗಳು ನಡೆಯಲಿವೆ.

Advertisement

10ನೇ ತರಗತಿಯ ವಿದ್ಯಾರ್ಥಿಗಳಿಗೆ ಜುಲೈ 1ರಿಂದ 14ರವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮುಖಕ್ಕೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್‌ ಬಾಟಲಿಗಳನ್ನು ತರುವುದು ಕಡ್ಡಾಯ. ಆದರೆ, ಕೈಗವಸುಗಳನ್ನು ಧರಿಸುವುದು ಐಚ್ಛಿಕವಾಗಿರುತ್ತದೆ ಎಂದು ಐಸಿಎಸ್‌ಇಯ ಸಿಇಒ ಮತ್ತು ಕಾರ್ಯದರ್ಶಿ ಗೆರ್ರಿ ಅರಾಥೂನ್‌ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವೇಳೆ, ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next