Advertisement

Idalia: ಫ್ಲೋರಿಡಾಗೆ ಅಪ್ಪಳಿಸಿದ ಇಡಾಲಿಯಾ

12:04 AM Aug 31, 2023 | Team Udayavani |

ವಾಷಿಂಗ್ಟನ್‌: ಅಮೆರಿಕದ ಫ್ಲೋರಿಡಾ ರಾಜ್ಯದ ಪಶ್ಚಿಮ ಕರಾವಳಿಗೆ ಇಡಾಲಿಯಾ ಚಂಡಮಾರುತ ಅಪ್ಪಳಿಸಿದೆ. ಚಂಡಮಾರುತ ಮತ್ತು ಭಾರೀ ಮಳೆಯ ಕಾರಣ ಅನೇಕ ಮನೆಗಳಿಗೆ ಹಾನಿಯಾಗಿದೆ. ಗಂಟೆಗೆ 205 ಕಿ.ಮೀ. ವೇಗದಲ್ಲಿ ಚಂಡಮಾರುತ ಚಲಿಸುತ್ತಿದೆ. ಹಲವೆಡೆ ಮರಗಳು ಧರೆಗುರುಳಿರುವ ಪರಿಣಾಮ ಎರಡು ಲಕ್ಷಕ್ಕೂ ಅಧಿಕ ಮನೆಗಳಿಗೆ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿದೆ. ಮನೆಗಳ ಛಾವಣಿ ಹಾರಿ ಹೋಗಿವೆ. ಹಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದ್ದು, ರಸ್ತೆಗಳು ಬಂದ್‌ ಆಗಿವೆ.

Advertisement

ಮುಂಜಾಗ್ರತ ಕ್ರಮವಾಗಿ ಈಗಾಗಲೇ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಫ್ಲೋರಿಡಾ ಅಧಿಕಾರಿಗಳು ತಿಳಿಸಿದ್ದಾರೆ. ಚಂಡಮಾರುತ ಮುಂದೆ ಚಲಿಸಿದ ಅನಂತರ, ಆಗಿರುವ ಹಾನಿಯನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಷ್ಟ್ರಿಯ ವಿಪತ್ತು ನಿರ್ವಹಣ ದಳದ 5,500 ಸಿಬಂದಿ ಹಾಗೂ ವಿದ್ಯುತ್‌ ಇಲಾಖೆಯ 30,000 ಸಿಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next