Advertisement
ನಗರದಲ್ಲಿ ನಡೆಯುತ್ತಿರುವ ಸಾವಯವ ಹಾಗೂ ಸಿರಿಧಾನ್ಯಗಳ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನಿರಂತರ ಬರಗಾಲ ಕಾಡುತ್ತಿದ್ದು, ಒಣ ಪ್ರದೇಶದಲ್ಲಿ ಚೆನ್ನಾಗಿ ಬೆಳೆಯುವ ಸಿರಿಧಾನ್ಯಗಳನ್ನು ರೈತರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿಬೆಳೆಯುತ್ತಿದ್ದಾರೆ. ಅವರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಸಿಗುತ್ತಿಲ್ಲ. ಹೀಗಾಗಿ, ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ 50 ರಿಂದ 60 ಲಕ್ಷ ಮಕ್ಕಳು ಸೌಲಭ್ಯ ಪಡೆಯುತ್ತಿದ್ದು, ವಾರದಲ್ಲಿ ಒಂದು ದಿನ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯದ ಆಹಾರ ಪದಾರ್ಥ ವಿತರಣೆ ಹಾಗೂ ಬೆಂಗಳೂರು ನಗರ ಸೇರಿ ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ವಾರದಲ್ಲಿ ಒಂದು ದಿನ ಸಿರಿಧಾನ್ಯಗಳ ಆಹಾರ ಪದಾರ್ಥವನ್ನು ವಿತರಿಸಿದರೆ ಆರೋಗ್ಯ ವೃದ್ಧಿಯಾಗುವುದರ ಜತೆಗೆ ರೈತರಿಗೆ ಸಿರಿಧಾನ್ಯ ಬೆಳೆಯಲು ಉತ್ತೇಜನ ನೀಡಿದಂತಾಗುತ್ತದೆ ಎಂದರು.