Advertisement

ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ: ಜೋಶಿ

12:17 PM Jul 10, 2017 | Team Udayavani |

ಹುಬ್ಬಳ್ಳಿ: ಉತ್ತಮ ಅಂಕ ಸಾಧನೆ ಮಾಡಿದವರನ್ನು ಸತ್ಕರಿಸುವುದರ ಜೊತೆಗೆ ವಿವಿಧ ಕಲಾ ಪ್ರಕಾರಗಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಕೇಶ್ವಾಪುರ ಅಂಬಿಕಾನಗರದ ಬ್ರಾಹ್ಮಣರ ಕ್ಷೇಮಾಭಿವೃದ್ದಿ ಸಂಘ ರವಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. 

Advertisement

ಸಂಗೀತ, ಸಾಹಿತ್ಯ, ಚಿತ್ರಕಲೆ, ರಂಗಕಲೆ ಮೊದಲಾದ ಕಲೆಗಳಲ್ಲಿ ಪ್ರಾವಿಣ್ಯತೆ ಪಡೆದವರನ್ನು ಪ್ರೋತ್ಸಾಹಿಸಬೇಕು ಎಂದರು. ಅಂಕಗಳಿಕೆಯಷ್ಟೇ ಸಾಧನೆಯಲ್ಲ. ಪ್ರತಿಯೊಬ್ಬರಲ್ಲಿಯೂ ಒಂದು ವಿಶಿಷ್ಟತೆ ಇರುತ್ತದೆ. ಅದನ್ನು ಗುರುತಿಸುವುದು ಮುಖ್ಯ. ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆಗಳನ್ನು ಮಾಡಬೇಕಿದೆ.  

ಮಕ್ಕಳಿಗೆ ಸಂಸ್ಕಾರ ನೀಡುವುದು ಅವಶ್ಯಕ. ಸಂಸ್ಕಾರ ಕಲಿಸದಿದ್ದರೆ ಸಮಾಜದಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಲಿವೆ ಎಂದು ಅಭಿಪ್ರಾಯಪಟ್ಟರು. ಉದ್ಯಮಿ ವಿಎಸ್‌ವಿ ಪ್ರಸಾದ ಮಾತನಾಡಿ, ಬಡ ವಿದ್ಯಾರ್ಥಿಗಳಿಗೆ ಮಾತ್ರ ಆರ್ಥಿಕ ನೆರವು ನೀಡಬೇಕು. ಶುಲ್ಕ ತುಂಬಲು ಶಕ್ತರಾಗಿರುವವರು ಕೂಡ ಬಡವರೆಂದು ನೆರವು ಪಡೆದುಕೊಳ್ಳುವುದನ್ನು ತಡೆಯಬೇಕು.

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ಸಂಘದ ಅಧ್ಯಕ್ಷ ಮೋಹನ ಕಟ್ಟಿ ಮಾತನಾಡಿ, ಮಕ್ಕಳು ಪ್ರತಿದಿನ ತಂದೆ-ತಾಯಿಗೆ ನಮಸ್ಕಾರ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು. ಅವರ ಆಶೀರ್ವಾದವಿದ್ದರೆ ಅಗಾಧ ಸಾಧನೆ ಮಾಡಲು ಸಾಧ್ಯ ಎಂದರು.

ಎಂ.ಬಿ. ನಾತು, ಸುನೀಲ ಗುಮಾಸ್ತೆ, ಗೋವಿಂದ ಜೋಶಿ, ಮನೋಹರ ಪರ್ವತಿ, ಕೃಷ್ಣ ಕುಲಕರ್ಣಿ, ಆರ್‌.ಕೆ. ಜೋಶಿ ಮೊದಲಾದವರಿದ್ದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. 

Advertisement
Advertisement

Udayavani is now on Telegram. Click here to join our channel and stay updated with the latest news.

Next