Advertisement

ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ: ರವಿ ಬಸ್ರೂರು

07:35 AM Apr 11, 2018 | Harsha Rao |

ಉಳ್ಳಾಲ: ಅನ್ಯರಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡುವ ಕಾರ್ಯ ಮಾಡಿದರೆ ಭವಿಷ್ಯದಲ್ಲಿ ಆ ಪ್ರತಿಭಾನ್ವಿತ ವ್ಯಕ್ತಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಏರಿದಾಗ ನಮ್ಮನ್ನು ಸ್ಮರಿಸುತ್ತಾರೆ ಎಂದು ಸಂಗೀತ ಮತ್ತು ಚಲನಚಿತ್ರ ನಿರ್ದೇಶಕ ರವಿ ಬಸ್ರೂರು ಅಭಿಪ್ರಾಯಪಟ್ಟರು.

Advertisement

ಅವರು ಮಂಗಳೂರು ವಿ.ವಿ.ಯ ವಿದ್ಯಾರ್ಥಿ ಕ್ಷೇಮಪಾಲನ ವಿಭಾಗದ ಆಶ್ರಯದಲ್ಲಿ ಮಂಗಳಾ ಸಭಾಂಗಣದಲ್ಲಿ “ಸಂಭ್ರಮ-2018′ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ಕಠಿನ ಪರಿಶ್ರಮದೊಂದಿಗೆ ಮುನ್ನಡೆದರೆ ಜೀವನ ದಲ್ಲಿ ಯಶಸ್ಸು ಸಾಧ್ಯ. ಆದರೆ ಪರಿಶ್ರಮದೊಂದಿಗೆ ಪ್ರೋತ್ಸಾಹವೂ ಅತ್ಯಂತ ಮಹತ್ವದ್ದು, ನನ್ನ ಜೀವನದಲ್ಲಿ ಇಂತಹ ಘಟನೆ ನಡೆದಿದೆ. ಆಪತ್ಕಾಲದಲ್ಲಿ ಸಹಾಯ ಮಾಡಿದ್ದರಿಂದ ಮತ್ತು ಸ್ವಂತ ಪರಿಶ್ರಮದಿಂದ ಸಂಗೀತ ಮತ್ತು ಸಿನೆಮಾ ನಿರ್ದೇಶನ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು ಎಂದರು.

ಮಂಗಳೂರು ವಿ.ವಿ. ಕುಲಪತಿ ಪ್ರೊ| ಕೆ. ಭೈರಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಂಗಳೂರು ವಿ.ವಿ.ಯು ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದ ಸಾಧನೆಗೆ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. ಆದ್ದರಿಂದ ಈ ಬಾರಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಂಗಳೂರು ವಿ.ವಿ. ಉತ್ತಮ ಸಾಧನೆ ಯೊಂದಿಗೆ ಗುರುತಿಸಿಕೊಳ್ಳುವಂತಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದ ಅಂತರ್‌ ವಿ.ವಿ. ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನೃತ್ಯ, ಪ್ರಹಸನ ಹಾಗೂ ನಾಟಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳನ್ನು ಪಡೆದ ಗೋವಿಂದದಾಸ್‌ ಕಾಲೇಜು ಹಾಗೂ ಶ್ರೀ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

Advertisement

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಧನೆಗೈದ ಮಂಗಳೂರು ವಿ.ವಿ. ಕ್ಯಾಂಪಸ್‌ನ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಪ್ರಿಯಾಂಕಾ, ಪ್ರಜ್ಞಾ  ಕೆ., ಮಾನಸಾ ಕೆ. ಅವರನ್ನು ಗೌರವಿಸಲಾಯಿತು.

ವಿ.ವಿ. ಪರೀಕ್ಷಾಂಗ ಕುಲಸಚಿವ ಪ್ರೊ| ಎ.ಎಂ. ಖಾನ್‌, ವಿದ್ಯಾರ್ಥಿ ಸಂಘದ ಅಧ್ಯಕ್ಷ ಚೇತನ್‌ ಕುಮಾರ್‌, ಉಪಾಧ್ಯಕ್ಷ ನಾಗರಾಜ್‌, ಕಾರ್ಯದರ್ಶಿ ಸುನಿಲ್‌, ಸಹಕಾರ್ಯದರ್ಶಿ ಶರಣ್ಯಾ ಆಳ್ವ, ಸಾಂಸ್ಕೃತಿಕ ಕಾರ್ಯದರ್ಶಿ ಪ್ರಜ್ಞಾ, ಸಹಸಾಂಸ್ಕೃತಿಕ ಕಾರ್ಯದರ್ಶಿ ಕಾವ್ಯಶ್ರೀ ಉಪಸ್ಥಿತರಿದ್ದರು.

ಮಂಗಳೂರು ವಿ.ವಿ. ವಿದ್ಯಾರ್ಥಿ ಕ್ಷೇಮ ಪಾಲನ ವಿಭಾಗದ ನಿರ್ದೇಶಕ ಪ್ರೊ| ಉದಯಕುಮಾರ್‌ ಬಾಕೂìರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಪ್ರಜ್ಞಾ ವಂದಿಸಿದರು. ವಿದ್ಯಾರ್ಥಿನಿ ಅಮೃತಾ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next