Advertisement
ಶನಿವಾರ ನಗರದ ಹಂಸವೇಣಿ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ಸಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳಲ್ಲಿನ ಸೃಜನಶೀಲತೆ ಹೊರ ಹೊಮ್ಮಿಸಲು ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸಿರುವುದು ತುಂಬಾ ಸಂತಸದ ವಿಷಯ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಮಹತ್ವ ನೀಡುವುದು ಅನಿವಾರ್ಯವಾಗಿದೆ ಎಂದರು.
Related Articles
Advertisement
ರೂ. 1.15 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆತೇರದಾಳ ಮತಕ್ಷೇತ್ರದ ಪ್ರಮುಖ ಕಾಲೇಜುಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನಗಳನ್ನು ನೀಡಲಾಗಿದೆ. ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕ್ರೀಡಾ ಮೈದಾನ ಮತ್ತು ಕಂಪೌಂಡ್ ನಿರ್ಮಾಣಕ್ಕೆ ರೂ. 1.15 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಯ ಮೂಲಕ ಮೂಲ ಸೌಕರ್ಯಗಳನ್ನು ನೀಡಲಾಗುತ್ತಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು. ಶನಿವಾರ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಈಗಾಗಲೇ ಎಂಟು ಹೆಚ್ಚುವರಿ ಕೋಣೆಗಳಿಗೆ ಅನುದಾನವನ್ನು ನೀಡಲಾಗಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವರ್ಗ ಕೊಣೆಗಳ ಕೊರತೆ ಬರುವುದಿಲ್ಲ. ಕಂಪೌAಡ್ ನಿರ್ಮಾಣದಿಂದಾಗಿ ಕಾಲೇಜಿಗೆ ಸೂಕ್ತ ರಕ್ಷಣೆ ದೊರೆಯಲಿದೆ. ತೇರದಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ರಬಕವಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳ ಅಭಿವೃದ್ದಿಗಾಗಿಯೂ ಕೂಡಾ ರೂ. 1 ಕೋಟಿಯಷ್ಟು ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನಗಳನ್ನು ನೀಡುವುದಾಗಿ ಉನ್ನತ ಶಿಕ್ಷಣ ಸಚಿವರು ಭರವಸೆ ನೀಡಿದ್ದಾರೆ. ಕ್ಷೇತ್ರದ ಸರ್ಕಾರಿ ಕಾಲೇಜುಗಳನ್ನು ಆದರ್ಶ ಕಾಲೇಜುಗಳನ್ನಾಗಿ ನಿರ್ಮಾಣ ಮಾಡಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು. ರಬಕವಿ ಬನಹಟ್ಟಿ ನಗರಸಭೆಯ ಅಧ್ಯಕ್ಷ ಸಂಜಯ ತೆಗ್ಗಿ, ಆಸಂಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಿವಕ್ಕ ಕಾಂಬಳೆ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ, ಪ್ರಾಚಾರ್ಯ ಶಂಕರ ಅರಬಳ್ಳಿ, ಕಾಲೇಜು ಅಭಿವೃದ್ಧಿ ಮಂಡಳಿಯ ಸದಸ್ಯರಾದ ಡಾ.ಎಸ್.ಎಸ್.ಹೂಲಿ, ಜಯಪ್ರಕಾಶ ಸೊಲ್ಲಾಪುರ, ಬಾಬಾಗೌಡ ಪಾಟೀಲ, ಶ್ರೀಶೈಲ ದಲಾಲ, ಮಹಾದೇವ ಕೋಟ್ಯಾಳ, ರಜನಿ ಶೇಠೆ, ಚಿದಾನಂದ ಹೊರಟ್ಟಿ, ವಿಶ್ವನಾಥ ಸವದಿ, ಹೀರಾಚಂದ ಕಾಸರ ಇದ್ದರು.