Advertisement

ಶಿಬಿರದಲ್ಲಿ ಗುರುತಿನ ಚೀಟಿ ವಿತರಣೆ

03:45 AM Jul 06, 2017 | Team Udayavani |

ಸೋಮವಾರಪೇಟೆ: ಅಂಗವಿಕಲರು ತಮ್ಮ ಗುರುತಿನ ಚೀಟಿಗಾಗಿ ಆಗಾಗ್ಗೆ ಸರಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಶಾಸಕರು ವಿಶೇಷ ಆಸಕ್ತಿ ವಹಿಸಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗಿಯಾದ ಫ‌ಲಾನುಭವಿಗಳಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು. 

Advertisement

ಸೋಮವಾರಪೇಟೆಯ ಶಾಸಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಅವರು ಫ‌ಲಾನುಭವಿಗಳಿಗೆ ಗುರುತಿನ ಚೀಟಿಯನ್ನು ವಿತರಿಸಿದರು.

ನಂತರ ಮಾತನಾಡಿದ ಅವರು, ಕಳೆದೆರಡು ತಿಂಗಳ ಹಿಂದೆ ಎಲ್ಲ ವೈದ್ಯರನ್ನು ಒಂದೇ ವೇದಿಕೆಯಡಿ ಕರೆತಂದು ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಮೂಲಕ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಗಿತ್ತು ಎಂದರು.

ಈ ಶಿಬಿರದಲ್ಲಿ ತಪಾಸಣೆಗೆ ಒಳಪಟ್ಟ ಫ‌ಲಾನುಭವಿಗಳಿಗೆ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆ ಮೂಲಕ ಗುರುತಿನ ಚೀಟಿಗಳನ್ನು ತಯಾರಿಸಿದ್ದು, ಒಟ್ಟು 100 ಮಂದಿ ಫ‌ಲಾನುಭವಿಗಳಿಗೆ ಪ್ರಥಮ ಹಂತದಲ್ಲಿ ಗುರುತಿನ ಚೀಟಿ ವಿತರಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next