ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆಗೆ ತೆರೆ ಬಿದ್ದ ಬೆನ್ನಲ್ಲೇ ಭಾನುವಾರ ಬೆಳಗ್ಗೆ ಮಾಗಡಿ ರಸ್ತೆ ಮಧ್ಯೆ ನೂರಾರು ಚುನಾವಣಾ ಗುರುತಿನ ಚೀಟಿಗಳು ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ.
ಮಾಗಡಿ ರಸ್ತೆಯ ಹೌಸಿಂಗ್ ಬೋರ್ಡ್ ಮೇಲ್ಸೆತ್ತುವೆ ಮೇಲೆ ರಾಜಾಜಿನಗರ ಮತ್ತು ಬಸವೇಶ್ವರನಗರ ವಾರ್ಡ್‌ಗಳಿಗೆ ಸೇರಿದ ನೂರಾರು ಗುರುತಿನ ಚೀಟಿಗಳು ಸಿಕ್ಕಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಮಾರ್ಗದಲ್ಲಿ ಹೋಗುತ್ತಿದ್ದ ಕ್ಯಾಬ್ ಚಾಲಕ ಸುರೇಶ್ ಎಂಬುವರು ರಸ್ತೆ ಮೇಲೆ ಬಿದ್ದಿದ್ದ ಗುರುತಿನ ಚೀಟಿಗಳನ್ನು ನೋಡಿ ಸ್ಥಳೀಯ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಅವುಗಳನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳದಲ್ಲಿ ಪತ್ತೆಯಾಗಿರುವ ಎಲ್ಲ ಗುರುತಿನ ಚೀಟಿಗಳು ಅಸಲಿಯಾಗಿದ್ದು, ಹಣಕ್ಕಾಗಿ ಮತದಾರರು ತಮ್ಮ ಗುರುತಿನ ಚೀಟಿಗಳನ್ನು ಮಾರಿಕೊಂಡಿರುವ ಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಒಟ್ಟು 180ಕ್ಕೂ ಅಧಿಕ ಗುರುತಿನ ಚೀಟಿಗಳು ಸಿಕ್ಕಿವೆ. ಈ ಬಗ್ಗೆ ಚುನಾವಣಾಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ ಏಣಿಕೆಗೂ ಮೊದಲೇ ರಸ್ತೆ ಮಧ್ಯೆ ಚುನಾವಣಾ ಗುರುತಿನ ಚೀಟಿಗಳು ಪತ್ತೆಯಾಗಿರುವುದು ಚುನಾವಣಾ ಅಕ್ರಮಕ್ಕೆ ಸಾಕ್ಷಿಯಾಗಿದೆ. ಮತದಾರರು ಹಣಕ್ಕೆ ಗುರುತಿನ ಚೀಟಿ ಮಾಡಿಕೊಂಡಿರಬಹುದು. ಈ ಬಗ್ಗೆ ಪೊಲೀಸರು ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳು ತನಿಖೆ ನಡೆಸಬೇಕು.
-ಸುರೇಶ್, ಕ್ಯಾಬ್ ಚಾಲಕ