Advertisement

ಶ್ರೀನಗರ್- ಜಮ್ಮು ರಾಷ್ಟ್ರೀಯ ಹೆದ್ದಾರಿ ಸಮೀಪ ಐಇಡಿ ಪತ್ತೆ, ತಪ್ಪಿದ ಭಾರೀ ಅನಾಹುತ

09:34 AM Nov 22, 2019 | Nagendra Trasi |

ಶ್ರೀನಗರ್: ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಐಇಡಿ(ಸುಧಾರಿತ ಸ್ಫೋಟಕ ಸಾಧನ) ಪತ್ತೆಯಾದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು ಎಂದು ವರದಿ ತಿಳಿಸಿದೆ.

Advertisement

ಅನಂತ್ ನಾಗ್ ಜಿಲ್ಲೆಯ ವಾನ್ ಪೋಹ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಗಳು ಪಹರೆ ನಡೆಸುತ್ತಿದ್ದ ಸಂದರ್ಭದಲ್ಲಿ ಐಇಡಿ ಪತ್ತೆಯಾಗಿತ್ತು. ಕೂಡಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ  ಐಇಡಿಯನ್ನು ನಿಷ್ಕ್ರಿಯಗೊಳಿಸುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಿದಂತಾಗಿದೆ ಎಂದು ವರದಿ ವಿವರಿಸಿದೆ.

ಸ್ಫೋಟ ನಡೆಸುವ ನಿಟ್ಟಿನಲ್ಲಿ ಉಗ್ರರೇ ಐಇಡಿಯನ್ನು ಅಡಗಿಸಿಟ್ಟುರುವುದಾಗಿ ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಶ್ರೀನಗರದಿಂದ ಜಮ್ಮುವಿಗೆ ತೆರಳಲು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಮುಖ ಸಂಚಾರದ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next