Advertisement
ಶುಕ್ರವಾರ ನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಅಭಯ ನಿಡಿದ ಲೋಕಾಯುಕ್ತ ನ್ಯಾಯಮೂರ್ತಿಗಳು, ಸುಳ್ಳು ದೂರುಗಳಿಂದ ತಮ್ಮ ವ್ಯಕ್ತಿತ್ವಕ್ಕೆ, ಕರ್ತವ್ಯ ನಿರ್ವಹಣೆಯಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ಅನೇಕ ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಕಾನೂನಿನಲ್ಲಿ ಇರುವ ಅವಕಾಶದಂತೆ ಸುಳ್ಳು ದೂರು ನೀಡಿದವರ ಮೇಲೆಯೂ ಕ್ರಮ ಕೈಗೊಳ್ಳುವ ಅಧಿಕಾರ ಲೋಕಾಯಕ್ತಕ್ಕೆ ಇದೆ ಎಂದರು.
Related Articles
Advertisement
ಅಂಗನವಾಡಿ ಕೇಂದ್ರಗಳಲ್ಲಿ ಸುಳ್ಳು ದಾಖಲೆಗಳೊಂದಿಗೆ ಮಕ್ಕಳ ಸಂಖ್ಯೆ ಹೆಚ್ಚಿಸಿ ಸರ್ಕಾರದ ಬೊಕ್ಕಸಕ್ಕೆ ಹೊರೆ ಹೇರುತ್ತಿರುವ ಕುರಿತು ದೂರುಗಳಿವೆ. ಹೀಗಾಗಿ ಈ ಕುರಿತು ಲೋಕಾಯುಕ್ತ ಇಲಾಖೆ ಅಧಿಕಾರಿಗಳು ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ನಿಖರ ಸಂಖ್ಯೆ, ದಾಖಲಾತಿ ಪರಿಶೀಲನೆ ನಡೆಸಿ, ವ್ಯತ್ಯಾಸ ಕಂಡುಬಂದರೆ ಸಮಗ್ರ ವರದಿ ನೀಡಬೇಕು.
ಇದಲ್ಲದೇ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು. ಜೊತೆಗೆ ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿ, ವರದಿ ನೀಡಬೇಕು.
ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯನ್ನು ಪರಿಣಾಮಕಾರಿಯಾಗಿ ಮಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಹಾಜರಾತಿ ನಿರ್ವಹಣೆ, ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಔಷಧಿ ತಲುಪುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಲ ಕಾಲಕ್ಕೆ ಭೇಟಿ ನೀಡಿ ದಾಖಲಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ವಿವರಣೆ ನೀಡಿ, ಜಿಲ್ಲೆಯಲ್ಲಿ 63 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, 6 ನಗರ ಆರೋಗ್ಯ ಕೇಂದ್ರ, 10 ನಮ್ಮ ಕ್ಲಿನಿಕ್‍ಗಳಲ್ಲಿ 5 ಕ್ಲಿನಿಕ್ ಆರಂಭಿಸಿದ್ದಾಗಿ ಲೋಕಾಯುಕ್ತಿರಿಗೆ ವಿವರಿಸಿದದರು.
ಕ್ಷೀಣಿಸುತ್ತಿರುವ ಕೆರೆಗಳನ್ನು ಸಮರ್ಥವಾಗಿ ನಿರ್ವಹಣೆ ಮಾಡಿ, ನೀರಿನ ಸಮೃದ್ಧವಾಗಿ ಸದ್ಭಳಕೆ ಮಾಡಿಕೊಳ್ಳಲು ಪರಿಣಾಮಕಾರಿ ಯೋಜನೆ ರೂಪಿಸುವಂತೆ ಸಲಹೆ ನೀಡಿದರು.