Advertisement
ಅಲ್ಲದೇ ಬೀದಿ ನಾಯಿಗಳ ಹಾವಳಿ-ದಾಳಿ ತಡೆಯಲು, ಪ್ರಾಣಿಗಳ ಜನನ ನಿಯಂತ್ರಣ ಕಾಯ್ದೆಯ ಅನುಷ್ಠಾನಕ್ಕೆ ತರಲು ಹೈಕೋರ್ಟ್ ಕೆಲವು ನಿರ್ದೇಶನಗಳನ್ನು ಸೂಚಿಸಿದೆ. ಬೆಳಗಾವಿ ಜಿಲ್ಲೆಯ ಎರಡು ವರ್ಷದ ಮಗ ಅಬ್ಬಸಾಲಿ ಯೂಸಫ್ ಸನದಿ 2018ರ ನ.29ರಂದು ಮನೆ ಹಿತ್ತಲಿನಲ್ಲಿ ಬಹಿರ್ದೆಸೆಗೆ ಹೋಗಿದ್ದಾಗ, ನಾಲ್ಕೈದು ನಾಯಿಗಳು ಏಕ ಕಾಲದಲ್ಲಿ ಮಗುವಿನ ಮೇಲೆ ದಾಳಿ ನಡೆಸಿ ಪಕ್ಕದ ಕೃಷಿ ಜಮೀನಿಗೆ ಎಳೆದೊಯಿದ್ದವು.
Related Articles
*ಬೀದಿ ನಾಯಿಗಳಿಗೆ ಸಂತಾನ ಹರಣ ಮತ್ತು ವ್ಯಾಕ್ಸಿನೇಷನ್ ಅನ್ನು ಪ್ರಾಣಿ ಕಲ್ಯಾಣ ಸಂಸ್ಥೆಗಳು ಮತ್ತು ಮೇಲ್ವಿಚಾರಣಾ ಸಮಿತಿ ಖಾತರಿಪಡಿಸಬೇಕು.
Advertisement
*ಪ್ರಾಣಿಗಳ ಜನನ ನಿಯಂತ್ರಣ ಕಾಯ್ದೆಯಡಿ ವಾಸಿಯಾಗದ ಕಾಯಿಲೆ ಅಥವಾ ಮಾರಣಾಂತಿಕ ಗಾಯಗಳಿಂದ ನರಳುತ್ತಿರುವ ಬೀದಿ ನಾಯಿಗಳಿಗೆ ತಜ್ಞ ಪಶು ವೈದ್ಯರಿಂದ ದಯಾ ಮರಣ ಕಲ್ಪಿಸಬೇಕು.
* ಆಕ್ರಮಣಕಾರಿ ನಾಯಿಗಳು ಮತ್ತು ರೇಬಿಸ್ ರೋಗದಿಂದ ನರಳುತ್ತಿರುವ ನಾಯಿಗಳ ಕುರಿತು ದೂರುಗಳು ಬಂದರೆ ಸ್ಥಳೀಯ ಪೌರಾಡಳಿತ ಸಂಸ್ಥೆಗಳ ಶ್ವಾನ ದಳವು ಪರಿಶೀಲಿಸಬೇಕು.
* ನಾಯಿಗೆ ರೇಬಿಸ್ ಇದ್ದರೆ ಸಹಜ ಸಾವು ಬರುವವರೆಗೂ ಅದನ್ನು ಐಸೋಲೇಷನ್ ನಲ್ಲಿ ಇಡಬೇಕು.
*ಬೀದಿ ನಾಯಿಗಳ ಕುರಿತು ನಾಗರಿಕರು ದೂರು ಸಲ್ಲಿಸಲು ದೂರು ಘಟಕ ಸ್ಥಾಪಿಸಬೇಕು.
* ನಾಯಿ ದಾಳಿಗೆ ತುತ್ತಾದವರಿಗೆ ಪರಿಹಾರ ಕಲ್ಪಿಸಲು ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸೂಕ್ತ ಮಾರ್ಗಸೂಚಿ ರಚಿಸಬೇಕು.