ಬೆಂಗಳೂರು: ಉಭಯ ಪಕ್ಷಗಳು ಒಪ್ಪಿದರೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಹೇಳಿಕೆ ನೀಡಿದ್ದಾರೆ.
ಬುಧವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಈ ಹೇಳಿಕೆ ನೀಡಿದ್ದಾರೆ.
ನಾನು ಸಹಜವಾಗಿ ಕಾಂಗ್ರೆಸ್‌ನಿಂದ ಸ್ಪರ್ಧೆ ಬಯಸಿದ್ದೆ ಆದರೆ ಕ್ಷೇತ್ರವನ್ನು ಮೈತ್ರಿ ಧರ್ಮಕ್ಕೆ ಅನುಸಾರವಾಗಿ ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ ಎಂದರು.
ಕಾಂಗ್ರೆಸ್ ವರಿಷ್ಠರು ಪ್ರಮೋದ್ ಮಧ್ವರಾಜ್ ಅವರಿಗೆ ಸ್ಪರ್ಧಿಸಲು ಅನುಮತಿ ನೀಡುತ್ತಾರಾ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ಅವರ ವಿರುದ್ಧ ಸೋಲು ಅನುಭವಿಸಿದ್ದರು.