Advertisement

ಮಕ್ಕಳು ಇಷ್ಟಪಟ್ಟು ಓದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ

07:29 AM Jan 30, 2019 | Team Udayavani |

ಕುದೂರು: ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

Advertisement

ನಗರದ ಗುರುಕುಲ ವಿದ್ಯಾಮಂದಿರದಲ್ಲಿ ನಡೆದ ವಾರ್ಷಿಕೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪೋಷಕರು ಎಷ್ಟೇ ಬಡವರಾಗಿದ್ದರೂ ತಮ್ಮ ಮಕ್ಕಳು ವಿದ್ಯಾವಂತರಾಗಬೇಕು. ಉತ್ತಮ ಕೆಲಸಕ್ಕೆ ಸೇರಿ ಸುಂದರವಾದ ಜೀವನವನ್ನು ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಶಾಲೆ, ಕಾಲೇಜಿಗೆ ಸೇರಿಸುತ್ತಾರೆ.

ಅದೇ ರೀತಿ ಶಿಕ್ಷಕರು ಪಾಠ, ಪ್ರವಚನ ಮಾಡುವ ಮೂಲಕ ಶಿಕ್ಷಣ ನೀಡಲು ಶ್ರಮಿಸುತ್ತಾರೆ. ಈ ಎರಡು ವರ್ಗದವರು ವಿದ್ಯಾರ್ಥಿಗಳಿಂದ ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೇ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಪೋಷಕರು, ಶಿಕ್ಷಕರ ಶ್ರಮಕ್ಕೆ ತಕ್ಕ ಬೆಲೆ ನೀಡಲು ಶ್ರದ್ಧೆಭಕ್ತಿಯಿಂದ ವಿದ್ಯಾಭ್ಯಾಸ ಮಾಡಬೇಕು ಎಂದು ಹೇಳಿದರು.

ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯ: ಗ್ರಾಪಂ ಅಧ್ಯಕ್ಷ ಕೆ.ಎಂ.ರಾಘವೇಂದ್ರ ಮಾತನಾಡಿ, ಪ್ರತಿಯೊಬ್ಬ ಮನುಷ್ಯನಿಗೆ ನೀರು, ಗಾಳಿ, ಆಹಾರ ಎಷ್ಟು ಮುಖ್ಯವೂ ಶಿಕ್ಷಣವೂ ಅಷ್ಟೇ ಮುಖ್ಯವಾಗಿದೆ. ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು. ಹಣ, ಆಸ್ತಿಯನ್ನು ಮಾಡುವುದಕ್ಕಿಂತ ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದು ತಿಳಿಸಿದರು.

ಗುಣಮಟ್ಟದ ಶಿಕ್ಷಣ ನೀಡಲು ಬದ್ಧ: ಗುರುಕುಲ ವಿದ್ಯಾ ಮಂದಿರದ ಕಾರ್ಯದರ್ಶಿ ಕೇಶಮೂರ್ತಿ ಮಾತನಾಡಿ, ಸಮಾಜದ ಪ್ರಗತಿ ಶಿಕ್ಷಣದಿಂದ ಮಾತ್ರ ಸಾಧ್ಯ. ಗುರುಕುಲ ವಿದ್ಯಾಸಂಸ್ಥೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಬದ್ಧವಾಗಿದೆ. ಇಲ್ಲಿನ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

Advertisement

ಉತ್ತಮ ಶಿಕ್ಷಣದಿಂದ ಜೀವನ ಸುಭದ್ರ: ತಾಪಂ ಸದಸ್ಯ ಅಣ್ಣೇಗೌಡ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ ಹರಿಸಬೇಕು. ಇಂದು ಟೀವಿ, ಮೊಬೈಲ್‌ಗ‌ಳಿಂದ ವಿದ್ಯಾರ್ಥಿಗಳು ಸಮಯ ಹಾಳು ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದರೆ ಮುಂದಿನ ಜೀವನ ಸುಭದ್ರವಾಗಿರುತ್ತದೆ ಎಂದು ಹೇಳಿದರು.

ಈ ವೇಳೆ ಮುಖ್ಯಮಂತ್ರಿ ಚಂದ್ರು, ತುಮಕೂರು ಜಿಲ್ಲಾ ಆಸ್ಪತ್ರೆ ನಿವೃತ್ತ ಅಧಿಕಾರಿ ಬಾದೇಗೌಡ, ವೆಂಕಟಸಿದ್ದಯ್ಯ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಪಥ ಸಂಚಲನ, ವ್ಯಾಯಾಮ, ಬೆಂಕಿಸಾಹಸ, ಯೋಗ ಪ್ರದರ್ಶನ, ಕೋಲಾಟ, ನೃತ್ಯ, ಬೈಕ್‌ ಸಾಹಸ ಪ್ರದರ್ಶನ ಮಾಡಿದರು. ಗುರುಕುಲ ವಿದ್ಯಾಮಂದಿರದ ಅಧ್ಯಕ್ಷ ಉದಯ ಕುಮಾರ್‌, ಗ್ರಾಪಂ ಸದಸ್ಯ ಕೆ.ಟಿ.ವೆಂಕಟೇಶ್‌, ಶಂಕರ್‌, ಬಾಲಕೃಷ್ಣ, ವಿಶ್ವನಾಥ್‌, ಶಿಕ್ಷಕ ಅರವಿಂದ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next