Advertisement

ಸಿಎಂ ಬಹಿರಂಗ ಕ್ಷಮೆ ಕೇಳದೆ ಹೋದರೆ ಮಾನನಷ್ಟ ಮೊಕದ್ದಮೆ ಹಾಕ್ತೇನೆ

04:10 PM Jul 04, 2017 | Team Udayavani |

 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಕ್ಷಮೆ ಕೇಳದೆ ಹೋದರೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂರಪ್ಪ ಗುಡುಗಿದ್ದಾರೆ.

Advertisement

ಬಿಜೆಪಿ ಸರ್ಕಾರ ಬರದೆ ಹೋಗಿದ್ದರೆ ಯಡಿಯೂರಪ್ಪ, ಅಮಿತ್‌ ಶಾ ಜೈಲಿನಲ್ಲಿರುತ್ತಿದ್ದರು ಎಂದು ಮುಖ್ಯಮಂತ್ರಿ ಹೇಳಿಕೆ ನೀಡಿದ್ದರು.ಈ ಬಗ್ಗೆ ಯಡಿಯೂರಪ್ಪ ಕೆಂಡಾಮಂಡಲರಾಗಿ ಮೂರು ದಿನಗಳ ಒಳಗೆ ಮುಖ್ಯಮಂತ್ರಿಗಳು ಸಾರ್ವಜನಿಕರವಾಗಿ ಕ್ಷಮೆ ಕೇಳಬೇಕು ಇಲ್ಲವಾದರೆ ಮಾನನಷ್ಟ ಮೊಕದ್ದಮೆ ಹಾಕುದ್ದೇನೆ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋರ್ಟ್‌ ನಲ್ಲಿ ನೋಡೋಣ ಎಂದು ತೀಕ್ಷ ಪ್ರತಿಕ್ರಿಯೆ ನೀಡಿದ್ದಾರೆ.

‘ವಿಸ್ತಾರಕ್‌’ ಮನೆ ಮನೆಗೆ ಯಡಿಯೂರಪ್ಪ 
ಜನಸಂಘದ ಸಂಸ್ಥಾಪಕ ಸದಸ್ಯರಾದ ಪಂಡಿತ್‌ ದೀನ್‌ದಯಾಳ್‌ ಉಪಾಧ್ಯಾಯ ಅವರ ಜನ್ಮ ಶತಾಬ್ಧಿಯ ಸಂದರ್ಭ ಬಿಜೆಪಿ ವಿಸ್ತಾರಕ್‌ ಹೆಸರಿನಲ್ಲಿ ಮನೆ ಮನೆ ಸಂಪರ್ಕ ಅಭಿಯಾನ ನಡೆಸುತ್ತಿದೆ. ಯಡಿಯೂರಪ್ಪ ಅವರು ಮಂಗಳವಾರ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಸಂಪಂಗಿ ರಾಮನಗರದಲ್ಲಿ ಕೆಲ ಮನೆಗಳಿಗೆ ಭೇಟಿ ನೀಡಿದರು. 

ಈ ವೇಳೆ ಕ್ರೈಸ್ತ ಸಮುದಾಯಕ್ಕೆ ಸೇರಿದ ಬಿಜೆಪಿ ಕಾರ್ಯಕರ್ತನೊಬ್ಬ ಯಡಿಯೂರಪ್ಪ ಅವರು ನಮ್ಮ ಮನೆಗೂ ಬರಲಿ ಟೀ ಕುಡಿದು ಹೋಗಲಿ ಎಂದು ಒತ್ತಾಯಿಸಿದ ದೃಶ್ಯ ಕಂಡು ಬಂತು.

Advertisement
Advertisement

Udayavani is now on Telegram. Click here to join our channel and stay updated with the latest news.

Next