Advertisement

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

08:06 PM Apr 23, 2024 | Team Udayavani |

ಲಿಂಗಸುಗೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಡಿ.ಕೆ.ಶಿವಕುಮಾರ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಭವಿಷ್ಯ ನುಡಿದರು.

Advertisement

ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆದ್ದರೆ ಡಿಕೆಶಿ ಸಿಎಂ ಸ್ಥಾನಕ್ಕೇರಿಸಲಾಗುತ್ತದೆ. ಈಗಾಗಲೇ ರಾಹುಲ್‌ ಗಾಂಧಿ  ಬಾಯಿಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಎಂದು ಬಂದಿದೆ ಎಂದರೆ ಅದು ನಿಜವೇ ಆಗುತ್ತದೆ. ಹೀಗಾಗಿ ಹಾಲುಮತ ಹಾಗೂ ಹಿಂದುಳಿದ ಸಮುದಾಯದವರು ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ಬಿಜೆಪಿಗೆ ಮತ ಹಾಕಿ ಕಾಂಗ್ರೆಸ್‌ ಸೋಲಿಸಬೇಕಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next