Advertisement
ಮಾಧ್ಯಮಗಳಿಗೆ ನೀಡಿದ ಸಂದರ್ಶನ ವೇಳೆ ಮಾತನಾಡಿ ಬೆಳಗಾವಿ ಸುವರ್ಣಸೌಧದ ಪರಿಷತ್ ಕಲಾಪದಲ್ಲಿ ಸಿ.ಟಿ ರವಿಯವರು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ್ದಾರೆ ಎಂದು ನಾನು ನಾಟಕ ಮಾಡೋದಕ್ಕೆ ಆಗುತ್ತಾ? ಸದನದಲ್ಲಿ ನಿಂತು ಸುಳ್ಳು ಆರೋಪ ಮಾಡೋದಕ್ಕೆ ಆಗುತ್ತಾ? ಸುಳ್ಳು ಹೇಳೋದಕ್ಕೆ ನನಗೇನು ಹುಚ್ಚಾ? ನಾಟಕವಾಡಿ ರಾಜಕಾರಣದಲ್ಲಿ ನಾನು ಏನಾದ್ರೂ ಗಳಿಸೋದು ಇದ್ಯಾ? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.
ʻಫ್ರೆಟ್ಟ್ರೇಟ್ʼ ಎಂದು ಉಚ್ಚಾರ ಮಾಡಿರುವುದಾಗಿ ಸಿ.ಟಿ ರವಿ ಹೇಳ್ತಾರಲ್ಲಾ ಎಂಬ ಪ್ರಶ್ನೆಗೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಫ್ರಸ್ಟ್ರೇಟ್ ಅನ್ನೋದಕ್ಕೂ ಆ ಪದಕ್ಕೂ ವ್ಯತ್ಯಾಸ ಇರಲ್ವಾ? ಅವರು ಹೇಳಿರೋದಕ್ಕೆ ಆಡಿಯೋ, ವಿಡಿಯೋ ಎಲ್ಲವೂ ನನ್ನತ್ರ ಸಾಕ್ಷಿ ಇದೆ. ಲಕ್ಷ್ಮೀ ಹೆಬ್ಬಾಳ್ಕರ್ ಸಂಪುಟದಲ್ಲಿರುವ ಏಕೈಕ ಮಹಿಳಾ ಸಚಿವೆ, ಸಾವಿರಾರು ಮಂದಿ ರಾಜಕಾರಣಕ್ಕೆ ಬರಲು ಮುಂದಾಗಿದ್ದಾರೆ. ಈಗ ಹೋರಾಟ ಮಾಡಲಿಲ್ಲ ಅಂದ್ರೆ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿದಂತೆ ಆಗುತ್ತದೆ. ನಾನು ಸಂಘರ್ಷ ಅಪಮಾನ ಮೆಟ್ಟಿನಿಂತು ಬೆಳೆದಿದ್ದೇನೆ. ಆದರೆ ಈ ಘಟನೆಯಿಂದ ನನ್ನ ಮನಸ್ಸಿಗೆ ಆಘಾತ ಉಂಟಾಗಿದೆ ಎಂದರು.
Related Articles
Advertisement
ಆ ರೀತಿಯ ಯಾವುದೇ ವಿಡಿಯೋ ಇಲ್ಲ, ಅದು ನಕಲಿ ಎಂಬ ಸಭಾಪತಿಗಳ ಹೇಳಿಕೆ ಕುರಿತು ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಸುಮಾರು ಸಂದರ್ಭದಲ್ಲಿ ನನಗೆ ಮಾರ್ಗದರ್ಶನ ಕೊಟ್ಟವರು ಸಭಾಪತಿಯವರು. ನನಗೆ ಫೋನ್ ಮಾಡಿ ಸಾಂತ್ವನ ಹೇಳಿದ್ದಾರೆ. ಅವರು ಯಾಕೆ ಈ ರೀತಿ ಹೇಳಿದ್ದಾರೋ ನನಗೆ ಗೊತ್ತಿಲ್ಲ, ಅವರ ರೂಲಿಂಗ್ ಬಗ್ಗೆ ಮಾತಾಡುವಷ್ಟು ಹಿರಿಯಳೂ ನಾನಲ್ಲ ಎಂದು ಸ್ಪಷ್ಟಪಡಿಸಿದರು.