Advertisement

ವಿದ್ಯಾವಂತರಿದ್ದರೆ ಸಮುದಾಯದ ಅಭಿವೃದ್ಧಿ ಸಾಧ್ಯ

12:39 PM Aug 06, 2018 | Team Udayavani |

ರಾಮನಗರ: ಗ್ರಾಮೀಣ ಪ್ರದೇಶದಲ್ಲಿರುವ ಸಮುದಾಯದ ಜನರನ್ನು ವಿದ್ಯಾವಂತರನ್ನಾಗಿ ಮಾಡಿದಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಆದಿ ಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ ಒಕ್ಕಲಿಗ ಸಮುದಾಯಕ್ಕೆ ಸಲಹೆ ನೀಡಿದರು. 

Advertisement

ನಗರದ ಹೊನ್ನಮ್ಮ ಕಲ್ಯಾಣ ಮಂಟಪದಲ್ಲಿ ಒಕ್ಕಲಿಗ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ವಿದ್ಯಾದಾನ: ಶಿಕ್ಷಣದ ಮಹತ್ವವನ್ನು ಅರಿತೇ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮಿಗಳು ಅನೇಕ ಶಾಲೆಗಳನ್ನು ತೆರೆದು ವಿದ್ಯಾದಾನಕ್ಕೆ ಕಾರಣರಾಗಿದ್ದಾರೆ. ಇಂದು ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದರು. 

ಸಮುದಾಯಕ್ಕಾಗಿ ಸಂಘಟಿತರಾಗಿ: ವೈಯಕ್ತಿಕ ಬಿನ್ನಾಭಿಪ್ರಾಯಗಳನ್ನು ಬದಿಗಿಡಿ, ಯಾವುದೇ ಪಕ್ಷದಲ್ಲಿದ್ದರೂ ಸಮುದಾಯದ ವಿಷಯದಲ್ಲಿ ರಾಜಕಾರಣ ಮಾಡಬೇಡಿ, ಸಮುದಾಯಕ್ಕೆ ಅನ್ಯಾಯವಾದಾಗ ಹೋರಾಟಕ್ಕೆ ಮುಂದಾಗಿ ಎಂದು ಸಲಹೆ ನೀಡಿದರು. 

ಹಿಂದಿನ ಸರ್ಕಾರದಲ್ಲಿ ಸಮುದಾಯಕ್ಕೆ ಆಗಿರುವ ಅನ್ಯಾಯ, ಕಿರುಕುಳ ಅಧಿಕಾರಿಗಳಿಗೆ ಗೊತ್ತಿದೆ. ಈಗಲಾದರೂ ಸಮುದಾಯ ಎಚ್ಚೆತ್ತುಕೊಳ್ಳಬೇಕು, ಒಕ್ಕಲಿಗರ ಸಂಘದ ಮತ್ತು ಒಕ್ಕಲಿಗ ಸರ್ಕಾರಿ ನೌಕರರ ಸಂಘಟನೆಗಳ ಕಾರ್ಯಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಗಳಿಕೆಯ ಒಂದು ಭಾಗವನ್ನು ಸಮುದಾಯದಲ್ಲಿ ಹಿಂದುಳಿದವರ ವಿದ್ಯಾಭ್ಯಾಸಕ್ಕೆ ವಿನಿಯೋಗಿಸಿ ಎಂದರು. 

Advertisement

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾುತು. ವಿಶೇಷ ಸಾಧನೆ ಮಾಡಿ ಸರ್ಕಾರಿ ಸೇವೆಗೆ ಸೇರಿರುವ ಡಾ.ಕಾವ್ಯಶ್ರೀ, ಡಾ.ಚೈತ್ರಾ ಕೆ.ಗೌಡ, ಡಾ.ನೇತ್ರಾ ಕೆ.ಗೌಡ, ಶಶಿರೇಖಾ ಅವರನ್ನು ಅಭಿನಂದಿಸಲಾಯಿತು. 

ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ಪುಟ್ಟರಾಮಯ್ಯ, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮೇಲಿಂಗು, ಕಾರ್ಯದರ್ಶಿ ಚೇತನ್‌ಕುಮಾರ್‌, ನಗರಸಭೆ ಉಪಾಧ್ಯಕ್ಷೆ ಮಂಗಳ, ಸದಸ್ಯರಾದ ಮಂಜುನಾಥ್‌, ಡಿ.ಕೆ.ಶಿವಕುಮಾರ್‌, ಸಿ.ಕೆ.ರವಿ, ಕೆ.ಚಂದ್ರಯ್ಯ, ಚಿಕ್ಕಶಂಕರಣ್ಣ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next