Advertisement

ತಾಕತ್ತಿದ್ದರೆ ಮಧ್ಯಂತರ ಚುನಾವಣೆಗೆ ಹೋಗಲಿ

11:08 PM Sep 06, 2019 | Team Udayavani |

ವಿಜಯಪುರ: ರಾಜ್ಯ ಬಿಜೆಪಿ ಸರ್ಕಾರ ಮಾರ್ಚ್‌ ವೇಳೆಗೆ ಮಧ್ಯಂತರ ಚುನಾವಣೆಗೆ ಸಿದ್ಧತೆ ನಡೆಸು ತ್ತಿದೆ. ಈ ಸರ್ಕಾರಕ್ಕೆ ತಾಕತ್ತಿದ್ದರೆ ಮಧ್ಯಂತರ ಚುನಾವಣೆಗೆ ಹೋಗಲಿ ಎಂದು ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲ ಸವಾಲು ಹಾಕಿದರು.

Advertisement

ಶುಕ್ರವಾರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಬಹುತೇಕ ರಾಜ್ಯಗಳು ಪ್ರವಾಹ ಪೀಡಿತವಾಗಿವೆ, ಜಿಡಿಪಿ ದರ ಕುಸಿತ, ಕಂಪನಿಗಳ ಸ್ಥಗಿತ, ಲಕ್ಷಾಂತರ ಜನರು ಉದ್ಯೋಗ ಕಳೆದು ಕೊಳ್ಳುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಕೂಡ ಪ್ರಧಾನಿ ಮೋದಿ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ವಿದೇಶದಲ್ಲೇ ಹೆಚ್ಚು ಕಾಲ ಕಳೆಯುವ ಅವರಿಗೆ ಭಾರತದ ವಾಸ್ತವಿಕ ಸ್ಥಿತಿಯ ಅರಿವೇ ಇಲ್ಲ. ಮೋದಿ ಶೋ ಮ್ಯಾನ್‌ ರೀತಿ ವರ್ತಿಸುತ್ತಿದ್ದಾರೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next