ಬಾಗಲಕೋಟೆ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ನಿಗದಿತ ಅವ ಧಿಯಲ್ಲಿ ಖರ್ಚು ಮಾಡುವ ಮೂಲಕ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಜಿಲ್ಲಾ ಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ಅ ಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎಸ್‌ಸಿಪಿ, ಟಿಎಸ್‌ಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮ ವಹಿಸಬೇಕು. ಮುಂದಿನ ಸಭೆಯಲ್ಲಿ ನೂರರಷ್ಟು ಪ್ರಗತಿಯಾಗಿರಬೇಕು. ತಾಲೂಕು ಮಟ್ಟದಲ್ಲಿಯೂ ಕಡ್ಡಾಯವಾಗಿ ಸಭೆ ಜರುಗಿಸಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಕೆಲವೊಂದು ಯೋಜನೆಗಳಲ್ಲಿ ಕಡಿಮೆ ಪ್ರಗತಿ ಸಾಧಿಸಿದ್ದು, ಬಿಡುಗಡೆಯಾಗಿ ಖರ್ಚು
ಮಾಡಿದ ನಂತರ ಉಳಿದ ಅನುದಾನವನ್ನು ಖರ್ಚು ಭರಿಸಲು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ ಮಾತನಾಡಿ, ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಎಸ್ ಸಿಪಿ ಅಡಿ ಶೇ. 74ರಷ್ಟು, ಟಿಎಸ್‌ಪಿ ಅಡಿ ಶೇ. 63ರಷ್ಟು ಪ್ರಗತಿಯಾಗಿರುವುದಾಗಿ ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಬಿರಾದಾರ ಮಾತನಾಡಿ, ಧನಸಹಾಯ ಮತ್ತು ಫೀ ಮರುಪಾವತಿ ಯೋಜನೆಯಡಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪ ಯೋಜನೆಯಡಿ ಶೇ.100 ಪ್ರಗತಿ ಸಾಧಿ ಸಿರುವುದಾಗಿ ತಿಳಿಸಿದರು.
ವಿವಿಧ ಇಲಾಖೆಯಡಿ ಒಟ್ಟಾರೆಯಾಗಿ ವಿಶೇಷ ಘಟಕ ಯೋಜನೆಯಡಿ ನಿಗದಿಪಡಿಸಿದ ಅನುದಾನ 94 ಕೋಟಿ ರೂ. ಪೈಕಿ 67.73 ಕೋಟಿ ರೂ. ಬಿಡುಗಡೆಯಾಗಿದ್ದು, ಅದರಲ್ಲಿ 39.73 ಕೋಟಿ ರೂ. ಖರ್ಚು ಮಾಡಲಾಗಿದೆ. ಅದೇ ರೀತಿಯ ಗಿರಿಜನ ಉಪ ಯೋಜನೆಯಡಿ ನಿಗದಿಪಡಿಸಿದ 37.14
ಕೋಟಿ ರೂ.ಗಳ ಅನುದಾನ ಪೈಕಿ 24.04 ಕೋಟಿ ಬಿಡುಗಡೆಯಾಗಿದ್ದು, ಅದರಲ್ಲಿ 16.81 ಕೋಟಿ ರೂ. ಖರ್ಚು ಮಾಡಿರುವುದಾಗಿ ಸಭೆಗೆ ತಿಳಿಸಲಾಯಿತು.
ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕೃಷಿ ಇಲಾಖೆಯ ಉಪನಿರ್ದೇಶಕ ಕೊಂಗವಾಡ, ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಪ್ರಶಾಂತ ಗಿಡ್ಡದಾನಪ್ಪಗೋಳ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲ್‌ಕುಮಾರ ಬಾವಿದಡ್ಡಿ, ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕ ಆರ್.ವಿ.ಚವ್ಹಾಣ ಹಾಜರಿದ್ದರು.