Advertisement

“ಗ್ಯಾರಂಟಿ” ನೀಡದಿದ್ರೆ ಅಧಿಕಾರ ಬಿಟ್ಟು ತೊಲಗಿ: ಬಿ.ಎಸ್‌. ಯಡಿಯೂರಪ್ಪ

10:08 PM Jun 22, 2023 | Team Udayavani |

ದಾವಣಗೆರೆ: ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಲು ಕಾಂಗ್ರೆಸ್‌ ಸರಕಾರಕ್ಕೆ ಆಗದಿದ್ದರೆ ಅಧಿ ಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಗುಡುಗಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರನ್ನು ಮರುಳು ಮಾಡಲು ಕಾಂಗ್ರೆಸ್‌ ದಿನಕ್ಕೊಂದು ನಾಟಕವಾಡುತ್ತಿದೆ. ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಕೇಳಿ ಭರವಸೆ ಕೊಟ್ಟಿದ್ದರಾ? ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂದು ಅವರೇ ಭರವಸೆ ಕೊಟ್ಟಿದ್ದಾರೆ. ಕೇಂದ್ರ ಸರಕಾರ ಈಗಾಗಲೇ 5 ಕೆಜಿ ಅಕ್ಕಿ ಕೊಡುತ್ತಿದ್ದು, ಸಿದ್ದರಾಮಯ್ಯ ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಲೇಬೇಕು ಎಂದರು.

ಶೀಘ್ರ ವಿಪಕ್ಷ ನಾಯಕನ ಆಯ್ಕೆ
ಸದ್ಯದಲ್ಲೇ ವಿಪಕ್ಷ ನಾಯಕರ ಆಯ್ಕೆ ಆಗಲಿದೆ. ಆ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಬಿಜೆಪಿ ನಾಯಕರ ಮಧ್ಯೆ ಅಸಮಾಧಾನ ಸ್ಫೋಟ
ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆ ಬಳಿಕ ಜಿಲ್ಲೆಯ ಬಿಜೆಪಿ ನಾಯಕರಲ್ಲಿ ಕುದಿಯುತ್ತಿರುವ ಆಂತರಿಕ ಮುಸುಕಿನ ಗುದ್ದಾಟ ಸ್ಫೋಟಗೊಂಡಿದೆ. ಗುರುವಾರ ಜಿಲ್ಲಾ ಕೇಂದ್ರದಲ್ಲಿ ನಡೆಯಬೇಕಿದ್ದ ಬಿಜೆಪಿ ಜಿಲ್ಲಾ ಕಾರ್ಯಕರ್ತರ ಸಮಾವೇಶ ದಿಢೀರನೆ ಬಾಗೇಪಲ್ಲಿ ಪಟ್ಟಣಕ್ಕೆ ಸ್ಥಳಾಂತರಗೊಂಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಾರದ ಮೊದಲೇ ನಗರದ ಜಿಲ್ಲಾ ಕೇಂದ್ರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಮಾಜಿ ಸಚಿವರಾದ ಆರ್‌.ಅಶೋಕ್‌ ನೇತೃತೃತ್ವದಲ್ಲಿ ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಆದರೆ ಮಾಜಿ ಸಚಿವ ಡಾ| ಕೆ.ಸುಧಾಕರ್‌ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂಬ ಸುಳಿವು ಅರಿತ ಬಿಜೆಪಿ ನಾಯಕರು ಸಮಾವೇಶವನ್ನು ಬಾಗೇಪಲ್ಲಿಯಲ್ಲಿ ಆಯೋಜಿಸಿದ್ದಾರೆ. ಡಾ| ಕೆ.ಸುಧಾಕರ್‌ ಚುನಾವಣೆಯಲ್ಲಿ ಸೋತ ಬಳಿಕ ವಿದೇಶಕ್ಕೆ ಹೋಗಿದ್ದು, ನಾಲ್ಕೈದು ದಿನಗಳ ಹಿಂದೆ ಮರಳಿದ್ದಾರೆ ಎನ್ನಲಾಗಿದೆ. ಆದರೂ ಸಮಾವೇಶಕ್ಕೆ ಆಹ್ವಾನಿಸಲು ಪಕ್ಷದ ನಾಯಕರು ಎಷ್ಟೇ ಸಂಪರ್ಕ ಮಾಡಿದರೂ ಸುಧಾಕರ್‌ ಸಿಕ್ಕಿಲ್ಲ.

ಅಧಿವೇಶನಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ: ನಳಿನ್‌
ಕಲಬುರಗಿ: ಅಧಿವೇಶನದೊಳಗೆ ರಾಜ್ಯ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲು ಹೇಳಿದರು. ಸುದ್ದಿ
ಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕನ ಅಗತ್ಯ ಇರುವುದು ಅಧಿವೇಶನದಲ್ಲಿ. ಈಗಾಗಲೇ ಪಕ್ಷದ ವೇದಿಕೆಯಲ್ಲಿ ಈ ಕುರಿತು ಚರ್ಚೆಯಾಗಿದೆ ಎಂದರು.
ಅಕ್ಕಿ ವಿಚಾರದಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿಲ್ಲ.

Advertisement

ದ್ವೇಷದ ರಾಜಕಾರಣ ಆರಂಭ ಮಾಡಿದ್ದೇ ಸಿಎಂ ಸಿದ್ದರಾಮಯ್ಯ. ಪ್ರಮುಖವಾಗಿ ಗೋಹತ್ಯೆ ಕಾಯ್ದೆ ವಾಪಸ್‌ ಪಡೆಯುತ್ತಿದ್ದಾರೆ. ಪಠ್ಯ ಪುಸ್ತಕದಲ್ಲಿ ಬದಲಾವಣೆ ತಂದಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿ ಸಲು ಆರಂಭಿಸಿದ್ದಾರೆ. ಹೀಗೆ ಎಲ್ಲ ರೀತಿಯ ದ್ವೇಷದ ರಾಜಕಾರಣ ಆರಂಭಿಸಿದ್ದೇ ಸಿದ್ದರಾಮಯ್ಯ. ಕೇಂದ್ರ ಸರಕಾರ ಐದು ಕೆಜಿ ಅಕ್ಕಿ ಕೊಡುತ್ತಿದೆ. ಅದನ್ನು ಬಿಟ್ಟು ರಾಜ್ಯ ಸರಕಾರ 10 ಕೆಜಿ ಅಕ್ಕಿ ಕೊಡಲಿ. ಅವರೇ ಮೊದಲು ಹೇಳಿದಂತೆ ಅಕ್ಕಿ ಕೊಡಲಿ. ನುಡಿದಂತೆ ನಡೆದು ತೋರಿಸಲಿ. ಸಾರಿಗೆ ಸಂಸ್ಥೆ ಸಿಬಂದಿಗೆ ಬರುವ ತಿಂಗಳಿನಿಂದ ಸರಿಯಾಗಿ ವೇತನ ಕೊಡಲಿ. ಹೆಚ್ಚಿಸಿರುವ ವಿದ್ಯುತ್‌ ದರವನ್ನು ಕಡಿಮೆ ಮಾಡುವ ಮೂಲಕ ಜನರ ನೋವಿಗೆ ಸ್ಪಂದಿಸಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next