ಜಮ್ಮು-ಕಾಶ್ಮೀರ: ಶಾಲೆಗಳಲ್ಲಿ ಭಜನೆ ಹಾಡಬೇಕೆಂಬ ಆದೇಶಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರದ ಬಿಜೆಪಿ ಸರ್ಕಾರದ ವಿರುದ್ಧ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೊಂದೆಡೆ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ತದ್ವಿರುದ್ಧ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ವಿಧಾನ ಸಭೆಯಲ್ಲಿ ಬಿಜೆಪಿಯ 40% ಭ್ರಷ್ಟಾಚಾರದ ವಿಷಯ ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧಾರ
“ನಾವು ದ್ವಿ ರಾಷ್ಟ್ರ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟಿಲ್ಲ. ಭಾರತ ಕೋಮುವಾದಿ ದೇಶವಲ್ಲ ಮತ್ತು ಭಾರತ ಜಾತ್ಯತೀತವಾಗಿದೆ. ನಾನು ಭಜನೆ ಮಾಡುತ್ತೇನೆ. ಒಂದು ವೇಳೆ ನಾನು ಭಜನೆ ಹಾಡಿದರೆ ಅದು ತಪ್ಪೇ? ಎಂದು” ಫಾರೂಖ್ ಅಬ್ದುಲ್ಲಾ ಪ್ರಶ್ನಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ತಿಳಿಸಿದೆ.
ಒಂದು ವೇಳೆ ಹಿಂದೂಗಳು ಅಜ್ಮೀರ್ ದರ್ಗಾಕ್ಕೆ ಭೇಟಿ ನೀಡಿದರೆ, ನಂತರ ಅವನು ಅಥವಾ ಅವಳು ಮುಸ್ಲಿಮ್ ಆಗಿ ಪರಿವರ್ತನೆ ಹೊಂದುತ್ತಾರೆಯೇ ಎಂದು ಮುಫ್ತಿಗೆ ತಿರುಗೇಟು ನೀಡಿದ್ದಾರೆ.
ಮಹಾತ್ಮಗಾಂಧಿಯ ಅಚ್ಚುಮೆಚ್ಚಿನ ರಘುಪತಿ ರಾಘವ ರಾಜಾ ರಾಮ್ ಭಜನೆಗೆ ವಿರೋಧ:
ಕಾಶ್ಮೀರದ ಶಾಲೆಯೊಂದರಲ್ಲಿ ಮಹಾತ್ಮಗಾಂಧಿಯವರ ಅಚ್ಚುಮೆಚ್ಚಿನ ರಘುಪತಿ ರಾಘವ ರಾಜಾರಾಮ್ ಭಜನೆಯನ್ನು ಹಾಡಿಸಿರುವ ವಿಡಿಯೋವನ್ನು ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
“ಧಾರ್ಮಿಕ ಮುಖಂಡರನ್ನು ಜೈಲಿಗಟ್ಟುವುದು, ಜಾಮಾ ಮಸೀದಿಯನ್ನು ಮುಚ್ಚುವುದು ಮತ್ತು ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಹಿಂದೂ ಭಜನೆಯನ್ನು ಹಾಡಲು ನಿರ್ದೇಶಿಸುವುದು” ಇದು ಕಾಶ್ಮೀರದಲ್ಲಿನ ಗೋಲ್ವಾಲ್ಕರ್ ಅವರು ನಿಜವಾದ ಹಿಂದೂತ್ವದ ಅಜೆಂಡಾವನ್ನು ಬಹಿರಂಗಪಡಿಸುತ್ತದೆ ಎಂದು ಮೆಹಬೂಬಾ ವಿಡಿಯೋ ಶೀರ್ಷಿಕೆಯಲ್ಲಿ ಉಲ್ಲೇಖಿಸಿದ್ದರು.