Advertisement

ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ, ಇಲ್ಲ ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತೇನೆ: ಸವದಿ

02:51 PM Jul 29, 2020 | mahesh |

ಬೆಂಗಳೂರು: ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ. ನಮಗಂತೂ ಯಾವುದೇ ಅಸಮಾಧಾನ ಇಲ್ಲ ಪಕ್ಷದ ಕಾರ್ಯಕರ್ತನಾಗಿ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡುತ್ತೇನೆ ಎಂದು ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು. ಕ್ಷೇತ್ರದ ಕೆಲಸಗಳ ಕಾರಣದಿಂದ ಸಿಎಂ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ  ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

Advertisement

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ವರ್ಷ ತುಂಬಿದ ಸಂಭ್ರಮದಲ್ಲಿ ಶಾಸಕರಿಗೆ ನಿಗಮ ಮಂಡಳಿ ಭಾಗ್ಯ ನೀಡಿದ್ದಾರೆ. ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಪ್ರೀತಿಯಿಂದ ನನ್ನನ್ನು ನೇಮಕ ಮಾಡಿದ್ದಾರೆ. ಆದರೆ, ಆ ಸ್ಥಾನವನ್ನು ನೇಕಾರ ಸಮುದಾಯದ ಕಾರ್ಯಕರ್ತರಿಗೆ, ಮುಖಂಡರಿಗೆ ನೀಡಿ ಎಂದು ಮುಖ್ಯ ಮಂತ್ರಿಯವರಿಗೆ ಮನವರಿಕೆ ಮಾಡುತ್ತೇನೆ ಎಂದು ಹೇಳಿದರು.

ತಮ್ಮ ಕ್ಷೇತ್ರದಲ್ಲಿ ಕೋವಿಡ್ ಹಾವಳಿಯ ಕುರಿತು ಮಾತನಾಡಿ, ಮಹಾರಾಷ್ಟ್ರದ ಸಂಪರ್ಕದಿಂದ ಕೋವಿಡ್ ಕಾಣಿಸಿಕೊಂಡಿತ್ತು, ಇವಾಗ ಕೋವಿಡ್ ನಿಯಂತ್ರಣದಲ್ಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next