Advertisement
ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರವಾಹ ಪರಿಸ್ಥಿತಿ ಹಾಗೂ ಬೆಳೆ ಹಾನಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
Related Articles
Advertisement
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ. ಮುಂಗಾರಿಗೆ ಹಳೆಯ ದಾಸ್ತಾನು ಸೇರಿ 1,16,827 ಮೆಟ್ರಿಕ್ ಟನ್ ಜಿಲ್ಲೆಗೆ ಪೂರೈಕೆಯಾಗಿದೆ. 1,08,495 ಮೆಟ್ರಿಕ್ ಟನ್ ಹಂಚಿಕೆ ಮಾಡಲಾಗಿದೆ. 9,732 ಮೆಟ್ರಿಕ್ ಟನ್ ಗೊಬ್ಬರ ದಾಸ್ತಾನಿದೆ. ಯೂರಿಯಾ ಗೊಬ್ಬರದ ಬದಲು ನ್ಯಾನೋ ಗೊಬ್ಬರ ಬಳಸಬೇಕು. ಈ ಕುರಿತಂತೆ ರೈತರಿಗೆ ಜಾಗೃತಿ ಮೂಡಿಸಬೇಕೆಂದು ಅ ಕಾರಿಗಳಿಗೆ ಸೂಚನೆ ನೀಡಿದರು.
ಕೃತಕ ಅಭಾವ ಸೃಷ್ಟಿಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೃಷಿ ಜಾಗೃತ ದಳದಿಂದ ಕಳಪೆ ಬೀಜ-ಗೊಬ್ಬರ, ಕೃತಕ ಅಭಾವ ಸೃಷ್ಟಿಸಿದವರ ಮೇಲೆ 144 ಪ್ರಕರಣಗಳು ದಾಖಲಾಗಿವೆ. 15 ಪ್ರಕರಣಗಳಲ್ಲಿ ಶಿಕ್ಷೆ ಹಾಗೂ ದಂಡ ಹಾಕಲಾಗಿದೆ. 28 ಕೋಟಿ ಮೊತ್ತದ ಕಳಪೆ ಬೀಜ ವಶಪಡಿಸಿಕೊಳ್ಳಲಾಗಿದೆ ಎಂದರು.
ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ಮಳೆಯಿಂದ ಆದ ಬೆಳೆ ಹಾನಿ ಮಾಹಿತಿಯನ್ನು ಸಭೆಗೆ ವಿವರಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ರೋಷನ್ ಇದ್ದರು.
ನಿಖರ ಸಮೀಕ್ಷೆ ಕೈಗೊಳ್ಳಿ
ಬೆಳೆ ಹಾನಿ ಸಮೀಕ್ಷೆ ಕೇವಲ ಕೃಷಿ ಇಲಾಖೆ ಕೆಲಸವೆಂದು ಪರಿಗಣಿಸಬೇಡಿ. ತೋಟಗಾರಿಕೆ, ರೇಷ್ಮೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ರೈತರ ಪರಿಸ್ಥಿತಿ ಗಂಭೀರವಾಗಿದೆ. ರೈತರು ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಅತ್ಯಂತ ಗಂಭೀರವಾಗಿ ಪರಿಗಣಿಸಿ ನಿಖರ ಸಮೀಕ್ಷೆ ಕೈಗೊಳ್ಳಿ. ಆ ಮೂಲಕ ಕಷ್ಟದಲ್ಲಿರುವ ರೈತರ ನೆರವಿಗೆ ನಿಲ್ಲಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಸೂಚನೆ ನೀಡಿದರು.
ಬೆಳೆ ಕಟಾವು ಸಮೀಕ್ಷೆ ನಿಖರವಾಗಿ ಕೈಗೊಳ್ಳಬೇಕು. ಬೆಳೆ ನಷ್ಟವಾದಲ್ಲಿ ಎಲ್ಲಿ ಸರ್ವೇ ಮಾಡಬೇಕು. ಕೇವಲ ವಿಮಾ ಕಂಪನಿಗಳು ಶಿಫಾರಸ್ಸು ಮಾಡಿದ ಪತ್ರಕ್ಕೆ ಸಹಿ ಹಾಕಬೇಡಿ. ಕೃಷಿ ಅಧಿಕಾರಿಗಳು ಖುದ್ದಾಗಿ ಪರಿಶೀಲನೆ ನಡೆಸಬೇಕು. ಇಲ್ಲವಾದರೆ ರೈತರಿಗೆ ವಿಷ ಕೊಟ್ಟ ಹಾಗೆ ಆಗುತ್ತದೆ. ಎಲ್ಲ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ∙ಬಿ.ಸಿ.ಪಾಟೀಲ, ಕೃಷಿ ಸಚಿವರು
ಜಿಲ್ಲೆಯಲ್ಲಿ 450 ಮಿ.ಮೀ. ವಾಡಿಕೆ ಮಳೆ ಎದುರು 632 ಮಿ.ಮೀ. ಮಳೆಯಾಗಿದೆ. ಶೇ.40ರಷ್ಟು ಹೆಚ್ಚಿನ ಮಳೆಯಾಗಿದೆ. 3.8 ಲಕ್ಷ ಹೆಕ್ಟೇರ್ ಮುಂಗಾರು ಬಿತ್ತನೆಯಾಗಿದ್ದು, ಅತಿವೃಷ್ಟಿಯಿಂದ ಜುಲೈನಿಂದ ಆಗಸ್ಟ್ 5ರವರೆಗೆ ಅಂದಾಜು 27,353 ಹೆಕ್ಟೇರ್, ಆಗಸ್ಟ್ 8ರವರೆಗೆ 40,027 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಈ ಸಮೀಕ್ಷೆ ನನಗೆ ತೃಪ್ತಿ ತಂದಿಲ್ಲ. ಹಾನಗಲ್ಲನಂತಹ ಮಲೇನಾಡು ಪ್ರದೇಶದಲ್ಲಿ ಕೇವಲ ಎರಡು ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಹೇಳುತ್ತಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 1,99,167 ರೈತರಿಗೆ 502 ಕೋಟಿ ಪರಿಹಾರ ಹಣ ನೀಡಲಾಗಿದೆ. 2021ನೇ ಸಾಲಿನಲ್ಲಿ 58,072 ರೈತರಿಗೆ 68 ಕೋಟಿ ವಿಮಾ ಹಣ ಬಂದಿದೆ. ರೈತ ವಿದ್ಯಾನಿಧಿ ಯೋಜನೆಯಡಿ 22 ಸಾವಿರ ವಿದ್ಯಾರ್ಥಿಗಳು 3.44 ಕೋಟಿ ಹಣ ನೀಡಲಾಗಿದೆ ಎಂದು ಮಾಹಿತಿ ನೀಡಿದರು.