Advertisement
ಮಾಜಿ ಸಿಎಂ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲನಾಥ್ ಭೋಪಾಲದಲ್ಲಿ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ 106 ಪುಟಗಳ ಪ್ರಣಾಳಿಕೆ ಬಿಡುಗಡೆ ಮಾಡಿದರು.ರಾಜ್ಯದಲ್ಲಿರುವ ಎಲ್ಲರಿಗೂ ಶಾಲೆಯಲ್ಲಿ ಉಚಿತ ಶಿಕ್ಷಣ ನೀಡುವ ಬಗ್ಗೆ ಕಾಂಗ್ರೆಸ್ ಭರವಸೆ ನೀಡಿದೆ. ಇದರ ಜತೆಗೆ “ಪಢೋ ಪಢಾವೋ ಯೋಜನೆ” ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 1ರಿಂದ 8ನೇ ತರಗತಿಯ ಮಕ್ಕಳಿಗೆ 500 ರೂ., 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ 1,500 ರೂ. ನೀಡುವುದಾಗಿ ಹೇಳಿದ್ದಾರೆ.
Related Articles
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಒಕ್ಕೂಟ ಅಧಿಕಾರಕ್ಕೆ ಬರು ವುದು ನಿಶ್ಚಿತ. ಒಂದು ವೇಳೆ, ಕಾಂಗ್ರೆಸ್ ನೇತೃತ್ವದ ಮೈತ್ರಿ ಕೂಟ ಅಧಿಕಾರಕ್ಕೆ ಏರಿದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾ ರ್ಜುನ ಖರ್ಗೆ ಅಥವಾ ವಯನಾಡ್ ಸಂಸದ ರಾಹುಲ್ ಗಾಂಧಿ ಪ್ರಧಾನಮಂತ್ರಿ ಹುದ್ದೆಗೆ ಏರಲಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಹೇಳಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯಾರೂ ಊಹಿಸಲಾಗದ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
Advertisement
ಐ.ಎನ್.ಡಿ.ಐ.ಎ. ಶೇ.60ನ್ನು ಪ್ರತಿನಿಧಿಸುತ್ತದೆ
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಒಕ್ಕೂಟ ಐ.ಎನ್.ಡಿ.ಐ.ಎ. ದೇಶದ ಶೇ.60 ಜನರನ್ನು ಪ್ರತಿನಿಧಿಸುತ್ತದೆ ಎಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಐದು ರಾಜ್ಯಗಳ ಚುನಾವಣೆಯಲ್ಲಿ ನಮ್ಮ ಪಕ್ಷವೇ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಿಜೋರಾಂನ ಐಜ್ವಾಲ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕಾಂಗ್ರೆಸ್ ಪರ ಆಯೋಜಿಸಲಾಗಿದ್ದ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪ್ರಬಲವಾಗಿ ಬೇರೂರಲು ಮಿಜೋ ನ್ಯಾಷನಲ್ ಫ್ರಂಟ್ ಮತ್ತು ಝೆಡ್‌ಪಿಎಂ ಪಕ್ಷಗಳು ಪ್ರಬಲ ಕಾರಣ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ, 750 ರೂ.ಗೆ ಎಲ್‌ಪಿಜಿ ಸಿಲಿಂಡರ್, ಉದ್ಯಮಶೀಲರಿಗೆ ಅನುಕೂಲಕರವಾಗಿರುವ ವಾತಾವರಣ ಕಲ್ಪಿಸಿಕೊಡಲಾಗುತ್ತದೆ ಎಂದು ವಾಗ್ಧಾನ ಮಾಡಿದ್ದಾರೆ.