Advertisement

ಕಸ್ತೂರಿ ರಂಗನ್‌ ವರದಿ ಜಾರಿಯಾದರೆ ಲಕ್ಷಾಂತರ ಮಂದಿ ಬೀದಿಪಾಲು: ಐವನ್‌ ಡಿ’ಸೋಜಾ

01:10 AM Jul 21, 2022 | Team Udayavani |

ಮಂಗಳೂರು: ಕಸ್ತೂರಿ ರಂಗನ್‌ ವರದಿ ಜಾರಿ ನಿಟ್ಟಿನಲ್ಲಿ ಕೇಂದ್ರ ಸರಕಾರದ ಪರಿಸರ ಇಲಾಖೆಯು ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿ ಅಧಿಸೂಚನೆ ಹೊರಡಿಸಿರುವ ಕಾರಣ ಕಾಡಿನ ಬದಿಯಲ್ಲಿ ವಾಸಿಸುತ್ತಿರುವ ಲಕ್ಷಾಂತರ ಮಂದಿ ಬೀದಿ ಪಾಲಾಗಲಿದ್ದಾರೆ. ಹೀಗಾಗಿ ಕೂಡಲೇ ಅಧಿಸೂಚನೆ ಯನ್ನು ಕೈಬಿಡಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ ಪತ್ರಿಕಾಗೊಷ್ಠಿಯಲ್ಲಿ ಆಗ್ರಹಿಸಿದ್ದಾರೆ.

Advertisement

ಕಸ್ತೂರಿ ರಂಗನ್‌ ವರದಿ ತಿರಸ್ಕಾರಕ್ಕೆ 2017ರಲ್ಲಿ ಆಗಿನ ಕಾಂಗ್ರೆಸ್‌ ಸರಕಾರ ಕೇಂದ್ರಕ್ಕೆ ಪತ್ರ ಬರೆದಿತ್ತು. ಪ್ರಾಯೋಗಿಕ ವರದಿ ಪಡೆದು ಅನಂತರ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿತ್ತು. ಬಿಜೆಪಿ ಸಚಿವರು, ಸಂಸದರು ಕಸ್ತೂರಿ ರಂಗನ್‌ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.ಅಧಿಸೂಚನೆ ಬಳಿಕ ಯಾರೂ ಮಾತನಾಡುತ್ತಿಲ್ಲ ಎಂದರು.

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕರ್ನಾಟಕದ 21 ಸಾವಿರ ಚದರ ಕಿ.ಮೀ. ಪ್ರದೇಶ ಒಳಗೊಂಡಿದೆ. ದ.ಕ. ಜಿಲ್ಲೆಯಲ್ಲಿ 43 ಗ್ರಾಮಗಳು ಪರಿಸರ ಸೂಕ್ಷ್ಮಎಂದು ಘೋಷಣೆಯಾಗಿದೆ. ರಾಜ್ಯದ 1,565 ಗ್ರಾಮಗಳು ಇದರೊಳಗೆ ಅಡಕವಾಗಿದ್ದು, ಈ ಪ್ರದೇಶ ಗಳಿಂದ 1,03,674 ಅರ್ಜಿಗಳು ಅರಣ್ಯ ಹಕ್ಕು ಕಾಯ್ದೆಯಡಿ ಅಕ್ರಮ ಸಕ್ರಮಕ್ಕೆ ಸರಕಾರಕ್ಕೆ ಸಲ್ಲಿಕೆಯಾಗಿವೆ. ಹೀಗಾಗಿ ಈ ಅರ್ಜಿಗಳನ್ನು ಇತ್ಯರ್ಥಪಡಿಸಿ ಅವರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next