Advertisement
ಭಾನುವಾರ ಜನನಿಬಿಡ ಪ್ರದೇಶಗಳಾದ ತರಕಾರಿ ಮಾರುಕಟ್ಟೆ, ಎಪಿಎಂಸಿ, ಗಡಿಯಾರ ಕಂಬ ಸೇರಿದಂತೆ ಹಲವೆಡೆ ಮಾಸ್ಕ್ ಅಭಿಯಾನ ನಡೆಸಿ, ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು. ನಿಯಮ ಉಲ್ಲಂಘಿಸಿದವರಿಗೆ ಸ್ಥಳದಲ್ಲೇ ದಂಡ ವಿ ಧಿಸುವ ಎಚ್ಚರಿಕೆ ನೀಡಿದರು. ಅನೇಕರಿಗೆ ದಂಡ ವಿಧಿಸಿ, ಮಾಸ್ಕ್ ನೀಡುವ ಮೂಲಕ ಜಾಗೃತಿ ಮೂಡಿಸಿದರು. ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡೇ ಬರಬೇಕು. ಇಲ್ಲದಿದ್ದಲ್ಲಿ ದಂಡ ಹಾಕಲಾಗುವುದು ಮಾತ್ರವಲ್ಲ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.
Related Articles
Advertisement
ಶನಿವಾರ ನಡೆದ ವೀಡಿಯೋ ಕಾನ್# ರೆನ್ಸ್‌ನಲ್ಲಿ ಮೂವರು ಸಚಿವರು ಕೊರೊನಾ ನಿಯಂತ್ರಣ ಸಂಬಂಧ ನೀಡಿರುವ ಕಟ್ಟುನಿಟ್ಟಿನ ಸೂಚನೆಗಳನ್ನು ಕಾರ್ಯಗತಗೊಳಿಸಲಾಗುವುದು. ಈ ಹಿನ್ನೆಲೆಯಲ್ಲಿ ಹೆಚ್ಚು ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಅಭಿಯಾನ, ಕಾರ್ಯಾಚರಣೆ ನಡೆಸಲಾಗುತ್ತಿದೆ. ವಿವಿಧ ಸಭೆ, ಸಮಾರಂಭಗಳಲ್ಲಿ ಎಷ್ಟು ಜನ ಸೇರಬೇಕು ಎಂಬ ಸೂಚನೆ ನೀಡಲಾಗಿದೆ. ಎಲ್ಲರೂ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.
ಕರ್ತವ್ಯ ನಿರತ ವೈದ್ಯರುಗಳಿಗೆ ಒಂದು ವೇಳೆ ಪಾಸಿಟಿವ್ ಬಂದರೆ ಅಂತಹವರನ್ನು ಸರ್ಕಾರಿ ಗೆಸ್ಟ್ ಹೌಸ್‌ಗಳಲ್ಲಿ ಕ್ವಾರಂಟೈನ್ ಮಾಡಲು ಈಗಾಗಲೇ ಸರ್ಕಾರಿ ಗೆಸ್ಟ್ ಹೌಸ್‌ಗಳನ್ನು ನಮ್ಮ ಸುಪರ್ದಿಗೆ ತೆಗೆದುಕೊಳ್ಳಲಾಗಿದೆ ಹಾಗೂ ಆಸ್ಪತ್ರೆಗಳಲ್ಲಿ ರೋಗಿಗಳನ್ನು ನೋಡಲು ಬರುವವರನ್ನು ನಿಯಂತ್ರಿಸಲು ಬ್ಯಾರಿಕೇಡ್ ಹಾಕಲಾಗಿದೆ. ಈಗಾಗಲೇ ಜಿಲ್ಲೆಯ ಆಸ್ಪತ್ರೆಗಳಲ್ಲಿ 1,882 ಬೆಡ್‌ಗಳು ಸಿದ್ಧವಿದ್ದು, 159 ಬೆಡ್‌ಗಳು ಭರ್ತಿಯಾಗಿವೆ. ಹಿಂದಿನ ವರ್ಷ 933 ಹಾಸಿಗೆಗಳು ಸಾಕಾಗಿದ್ದವು. ಈಗ ಎಂತಹ ಪರಿಸ್ಥಿತಿ ಬಂದರೂ ನಿಭಾಯಿಸಲು ಜಿಲ್ಲಾಡಳಿತ ಸಿದ್ಧವಿದೆ ಎಂದು ತಿಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ಕೊರೊನಾ ಸೋಂಕು ತೀವ್ರಗೊಳ್ಳುತ್ತಿದ್ದರೂ ಜನರು ನಿರ್ಲಕ್ಷé ವಹಿಸುತ್ತಿದ್ದಾರೆ. ಈಗಾಗಲೇ ಜಿಲ್ಲಾ ಧಿಕಾರಿಗಳೊಂದಿಗೆ ಜನಸಂದಣಿ ಇರುವ ಸ್ಥಳಗಳಿಗೆ ತೆರಳಿ ಜಾಗೃತಿ ಮೂಡಿಸಿ, ನಿಯಮ ಉಲ್ಲಂಘನೆ ಮಾಡುವವರಿಗೆ ಸ್ಥಳ ದಂಡ ವಿ ಧಿಸುತ್ತಿದ್ದೇವೆ. ಮದುವೆ ಸಮಾರಂಭ, ಕಲ್ಯಾಣ ಮಂಟಪ, ರಾಜಕೀಯ ಆಚರಣೆಗಳು ಸೇರಿದಂತೆ ಸಭೆ ಸಮಾರಂಭಗಳಲ್ಲಿ ಜನರು ಸೇರುವುದನ್ನ ಮಿತಿಗೊಳಿಸಲಾಗಿದೆ ಹಾಗೂ ಧಾರ್ಮಿಕ ಆಚರಣೆಗಳನ್ನು ನಿಷೇಧಿ ಸಲಾಗಿದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ರೆಮ್ ಡೆಸಿವರ್ ಕಾಳಸಂತೆಯಲ್ಲಿ ಮಾರಾಟವಾಗುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ, ತಹಶೀಲ್ದಾರ್ ಬಿ.ಎನ್. ಗಿರೀಶ್ ಇತರರು ಇದ್ದರು.