Advertisement

ಉಗ್ರರನ್ನು ಮಟ್ಟಹಾಕಿ, ಇಲ್ಲದಿದ್ರೆ ನಾವು ಬುದ್ಧಿಕಲಿಸ್ತೇವೆ; ಅಮೆರಿಕ!

03:59 PM Oct 27, 2017 | Sharanya Alva |

ವಾಷಿಂಗ್ಟನ್: ಒಂದು ವೇಳೆ ಭಯೋತ್ಪಾದನಾ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪಾಕಿಸ್ತಾನ ವಿಫಲವಾದರೆ, ನಾವು ಅದನ್ನು ಬೇರೆಯೇ ರೀತಿಯಲ್ಲಿ ಮಾಡಬೇಕಾದೀತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ ಕಠಿಣ ಎಚ್ಚರಿಕೆಯನ್ನು ರವಾನಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಪಾಕಿಸ್ತಾನ ಉಗ್ರಗಾಮಿ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕು, ಪಾಕ್ ನೆಲದಲ್ಲಿರುವ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಬೇಕೆಂದು ವಿದೇಶಾಂಗ ಸಚಿವಾಲಯದ ವಕ್ತಾ ಹೀಥೆರ್ ನೌಎರ್ಟ್ ಪಿಟಿಐ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ರೆಕ್ಸ್ ಟಿಲ್ಲರ್ ಸನ್ ಅವರು ಅಫ್ಘಾನಿಸ್ತಾನ, ಪಾಕಿಸ್ತಾನ ಹಾಗೂ ಭಾರತಕ್ಕೆ ಭೇಟಿ ನೀಡಿದ ನಂತರ ಈ ಹೇಳಿಕೆಯನ್ನು ನೀಡಿರುವುದಾಗಿ ನೌಎರ್ಟ್ ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next