Advertisement
ದ.ಕ. ಜಿಲ್ಲೆಯಲ್ಲಿ ಇತ್ತೀಚಿನ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ಕಾಂಗ್ರೆಸ್ ಪಕ್ಷದ ಆಕ್ರಮಣಕಾರಿ ನಡೆಯನ್ನು ಸಮರ್ಥವಾಗಿ ಎದುರಿಸಲು ಪ್ರತಿ ತಂತ್ರಗಳನ್ನು ಸಿದ್ಧಪಡಿಸುತ್ತಿದೆ. ಇದರ ಮೊದಲ ಅಂಗವಾಗಿ ಕರಾವಳಿ ಭಾಗದ ಸಂಸದರೊಬ್ಬರಿಗೆ ಕೇಂದ್ರ ಸಚಿವ ಸ್ಥಾನ ನೀಡಿ ಕೇಂದ್ರದ ಶಕ್ತಿಕೇಂದ್ರ ಸ್ಥಾಪಿಸಲು ಮುಂದಾಗಿದೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಶೋಭಾ ಅಥವಾ ನಳಿನ್ ಅರಿಗೆ ಮಂತ್ರಿ ಪದವಿ ನೀಡುವ ಬಗ್ಗೆ ಚಿಂತನೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಅವರು ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಪಕ್ಷ ಸಂಘಟನೆ ಕುರಿತಂತೆ ಪಕ್ಷದ ಪ್ರಮುಖರು ಹಾಗೂ ಬಿಜೆಪಿ ಸಂಸದರ ಜತೆ ಗಂಭೀರ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆ ವಿಚಾರವೂ ಪ್ರಸ್ತಾವನೆಗೆ ಬಂದಿದೆ. ಈ ವೇಳೆ ನಳಿನ್ ಕುಮಾರ್ ಕಟೀಲು ಅವರು ತನಗೆ ಈಗಾಗಲೇ ಪಕ್ಷದ ಜವಾಬ್ದಾರಿ ಇದೆ. ಆದುದರಿಂದ ಸಚಿವ ಸ್ಥಾನ ಬೇಡ ಎಂಬುದಾಗಿ ಅಭಿಪ್ರಾಯ ತಿಳಿಸಿದ್ದರು. ಆಗ ಅಮಿತ್ ಶಾ “ಪಕ್ಷ ಕೊಡುವ ಜವಾಬ್ದಾರಿಯನ್ನು ವಹಿಸಲು ಎಲ್ಲರೂ ಸಿದ್ದರಿರಬೇಕು’ ಎಂಬ ಖಡಕ್ ಸೂಚನೆಯನ್ನು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
Related Articles
Advertisement
ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ಧಾಳಿಯಲ್ಲಿ ಮುಂಚೂಣಿಯಲ್ಲಿರುವ ಶೋಭಾ ಕರಂದ್ಲಾಜೆ ಅವರ ಹೆಸರು ಕೂಡ ಪ್ರಸ್ತಾವನೆಯಲ್ಲಿದೆ. ಪಕ್ಷದೊಳಗೆ ಇವರ ಬಗ್ಗೆ ರಾಜ್ಯ ಘಟಕದಲ್ಲಿ ಅಸಮಾಧಾನದ ಅಲೆಗಳಿದ್ದರೂ ಅಮಿತ್ ಶಾ ಅವರ ಮಾತೇ ಅಂತಿಮವಾಗಿರುವುದರಿಂದ ಇವುಗಳು ಪರಿಗಣನೆಗೆ ಬರುವ ಸಾಧ್ಯತೆಗಳಿಲ್ಲ.
ಅಧಿಕಾರದ ಬಲ ನೀಡುವ ಗುರಿಬಿಜೆಪಿಯ ಭದ್ರ ನೆಲೆ ಎಂದು ಪರಿಗಣಿಸಲ್ಪಟ್ಟಿರುವ ಅವಿಭಜಿತ ದ.ಕನ್ನಡ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 13 ಸ್ಥಾನಗಳಲ್ಲಿ 2 ಸ್ಥಾನಗಳನ್ನಷ್ಟೆ ಪಡೆಯಲು ಶಕ್ತವಾಗಿತ್ತು. 10 ಸ್ಥಾನಗಳನ್ನು ಕಾಂಗ್ರೆಸ್ ಹಾಗೂ 1 ಸ್ಥಾನ ಪಕ್ಷೇತರರ ಪಾಲಾಗಿತ್ತು. ಈ ಬಾರಿ ದ.ಕನ್ನಡ ಜಿಲ್ಲೆಯಲ್ಲಿ ಎಲ್ಲ 8 ಸ್ಥಾನಗಳನ್ನು ಗೆಲ್ಲುವ ದೃಢ ಸಂಕಲ್ಪದೊಂದಿಗೆ ಈಗಾಗಲೇ ಕಾಂಗ್ರೆಸ್ ಕಾರ್ಯೋ ನ್ಮುಖ ವಾಗಿದ್ದು ಈ ನಿಟ್ಟಿನಲ್ಲಿ ಕಾರ್ಯತಂತ್ರ ಗಳನ್ನು ರೂಪಿಸತೊಡಗಿದೆ. ಇದೇ ಸಂದರ್ಭದಲ್ಲಿ ಕಾರ್ಯಕರ್ತರ ಭದ್ರಬುನಾದಿ ಹೊಂದಿರುವ ಬಿಜೆಪಿ ಕೂಡ ಉಭಯ ಜಿಲ್ಲೆಗಳಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸಿದೆ. ಆದರೆ ರಾಜ್ಯ ದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಬಲವಿದ್ದು ಇದು ಆ ಪಕ್ಷಕ್ಕೆ ಅನುಕೂಲಕರವಾಗಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಯಲ್ಲಿಯೂ ಒಂದು ಅಧಿಕಾರ ಶಕ್ತಿಯನ್ನು ಸ್ಥಾಪಿ ಸುವುದು ಕರಾವಳಿ ಭಾಗಕ್ಕೆ ಕೇಂದ್ರ ಸಚಿವ ಸಂಪುಟ ಸ್ಥಾನ ನೀಡುವ ಚಿಂತನೆಯ ಹಿಂದಿರುವ ಪ್ರಮುಖ ಉದ್ದೇಶವಾಗಿದೆ ಎನ್ನಲಾಗಿದೆ. ಕೇಶವ ಕುಂದರ್