ರಬಕವಿ ಬನಹಟ್ಟಿ : ಈ ಬಾರಿ ಬಿಸಿಲಿನ ತಾಪದಿಂದ ಭೂಮಿ ತಾಪಮಾನ ಹೆಚ್ಚಾಗಿದ್ದು, ಇದೀಗ ಕೆಲವು ದಿನಗಳಿಂದ ಉರಿಯುತ್ತಿರುವ ಮಳೆ ತಂಪೆರದಿದ್ದು, ಮುಂಬರುವ ಮಳೆಯನ್ನು ನಂಬಿ ರಬಕವಿ ಬನಹಟ್ಟಿ ತಾಲೂಕಿನಾದ್ಯಂತ ರೈತರು ಮುಂಗಾರು ಬಿತ್ತನೆಗೆ ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಭೂಮಿ ಹದಗೊಳಿಸುವ ಜೊತೆಗೆ ಕೃಷಿ ಪರಿಕರಗಳ ತಯಾರಿಕೆಯಲ್ಲಿ ನಿರತರಾಗಿದ್ದಾರೆ.
Advertisement
ಅಲ್ಲದೇ ಈ ಬಾರಿ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ರೈತ ಕಾದು ಕುಳಿತಿದ್ದು, ರೈತರ ನಂಬಿಗಸ್ತ ಮಳೆ ರೋಹಿಣಿ ಇದೇ 25ರಿಂದ ಪ್ರಾರಂಭವಾಗುತ್ತಿದ್ದು, ಈ ರೋಹಿಣಿ ಮಳೆ ಕೈ ಹಿಡಿದರೆ ಬದುಕು ಬಂಗಾರವಾಗುತ್ತದೆ ಎಂಬ ಆಸೆಯಿಂದ ರೈತ ಕುಳಿತ್ತಿದ್ದು, ಪ್ರತಿ ಬಾರಿಯೂ ಮಳೆಗಾಗಿ ಕಾಯುವ ರೈತರು ಬಿತ್ತನೆ ಬೀಜವನ್ನಿಟ್ಟುಕೊಂಡು ಆಕಾಶದತ್ತ ಮುಖ ಮಾಡಿರುವುದು ಸರ್ವೇ ಸಾಮಾನ್ಯ. ಈ ಬಾರಿ ಪೂರ್ವ ಬಾವಿಯಾಗಿ ಉತ್ತಮ ಮಳೆಯಾಗಿದ್ದು, ರೈತರು ಬಿತ್ತನೆಗೆ ಬೇಕಾದ ಕುಂಟೆ, ಪಲಗಾ, ಕೂರಿಗೆ, ನೊಗ, ಬುಕ್ಕಾ ಸಿದ್ಧತೆಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಡಿಗೇರ ಹಾಗೂ ಕಮ್ಮಾರರ ಬಳಿ ತಮ್ಮ ಪರಿಕರಗಳ ದುರಸ್ಥಿ ಮಾಡಿಸಿಕೊಂಡು ಬಿತ್ತನೆಗೆ ಸಿದ್ಧವಾಗಿದ್ದಾರೆ. ಕೆಲವು ಭಾಗ ಕೃಷ್ಣಾ ನದಿಯ ನೀರನ್ನು ಅವಲಂಭಿಸಿದರೆ ಕೆಲವು ಬಾಗ ಮಳೆ ಹಾಗೂ ಘಟಪ್ರಭಾ ಎಡದಂಡೆ ಕಾಲುವೆಯನ್ನು ಅವಲಂಭಿಸಿದ್ದಾರೆ.
Related Articles
Advertisement
ರೈತರು ಸದ್ಯ ರೈತರು ರೋಹಿಣಿ ಮಳೆ ನಿರೀಕ್ಷೆಯಲ್ಲಿದ್ದು ಮಳೆ ಸಮೃದ್ದಿಯಾಗಿ ಬಂದರೆ ರೈತನ ಬದುಕು ಬಂಗಾರವಾಗುವುದರಲ್ಲಿ ಎರಡು ಮಾತಿಲ್ಲ. ಈ ಸಂದರ್ಭದಲ್ಲಿ ಯಾವುದೇ ಬಿತ್ತನೆ ಮಾಡಿದರೂ ಬರುವ ರೋಗಗಳು ಕಡಿಮೆ, ಬೆಳೆ ಸಮೃದ್ಧಿಯಾಗಿ ಬರುತ್ತದೆ. ಎನ್ನುವ ವಾಡಿಕೆ ಇದೆ. ರೈತರು ಸದ್ಯ ರೈತರು ರೋಹಿಣಿ ಮಳೆ ನಿರೀಕ್ಷೆಯಲ್ಲಿದ್ದು ಮಳೆ ಸಮೃದ್ದಿಯಾಗಿ ಬಂದರೆ ರೈತನ ಬದುಕು ಬಂಗಾರವಾಗುವುದರಲ್ಲಿ ಎರಡು ಮಾತಿಲ್ಲ.ಸದಾಶಿವ ಬಂಗಿ, ಸಾವಯವ ಕೃಷಿಕರು ಜಗದಾಳ
-ಕಿರಣ ಶ್ರೀಶೈಲ ಆಳಗಿ