Advertisement
ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಬಿಜೆಪಿ ಸರ್ಕಾರ ರಚನೆಯಾದ ಕೂಡಲೇ ಸಮಾನ ನಾಗರಿಕ ಸಂಹಿತೆ ಜಾರಿಗಾಗಿ ಸಮಿತಿಯನ್ನು ರಚಿಸಲಾಗುವುದು. ಆರು ತಿಂಗಳ ಒಳಗಾಗಿ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗುವುದು’ ಎಂದು ತಿಳಿಸಿದ್ದಾರೆ.
Related Articles
ಕರ್ನಾಟಕದಲ್ಲಿ ಯಡಿಯೂರಪ್ಪನವರು ಅಧಿಕಾರದಲ್ಲಿದ್ದಾಗ ಜಾರಿ ಮಾಡಿದ್ದ ಭಾಗ್ಯಲಕ್ಷ್ಮೀ ಯೋಜನೆ ಮಾದರಿಯಲ್ಲಿ ಹೆಣ್ಣು ಮಗು ಜನಿಸಿದ ಸಂದರ್ಭದಲ್ಲಿ 2 ಲಕ್ಷ ರೂ. ಸ್ಥಿರ ಠೇವಣಿ, ಹೆಣ್ಣು ಮಗು 21 ವರ್ಷಕ್ಕೆ ಬಂದ ಸಂದರ್ಭದಲ್ಲಿ ಬಡ್ಡಿ ಸಮೇತ ಹಣ ಪಾವತಿ, ಪ್ರತಿ ವರ್ಷ ಸೆ.17ರಂದು “ಹೈದರಾಬಾದ್ ವಿಮೋಚನಾ ದಿನಾ’ ಆಚರಣೆ, ಮಹಿಳೆಯರಿಗಾಗಿ 10 ಲಕ್ಷ ಉದ್ಯೋಗ ಸೃಷ್ಟಿ, ಇವು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳಾಗಿವೆ.
Advertisement
ತನಿಖೆಯ ವಾಗ್ಧಾನ:ಇದೇ ವೇಳೆ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಹಿಂದಿನ ಬಿಆರ್‌ಎಸ್ ಸರ್ಕಾರದಲ್ಲಿ ನಡೆದಿರುವ ಕಾಳೇಶ್ವರಂ, ಧಾರಣಿ ಹಗರಣ ಸೇರಿದಂತೆ ಹಣಕಾಸು ಹಗರಣಗಳ ತನಿಖೆ ನಡೆಸಲಾಗುವುದು ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ವಾಗ್ಧಾನ ಮಾಡಿದೆ. ಪ್ರಮುಖಾಂಶ:
* ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್
* ಒಬಿಸಿ, ಎಸ್‌ಸಿ/ಎಸ್‌ಟಿ ಮೀಸಲು ಹೆಚ್ಚಳ
* ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವ್ಯಾಟ್ ಕಡಿತ,
* ವರ್ಷಕ್ಕೆ ನಾಲ್ಕು ಉಚಿತ ಅಡುಗೆ ಸಿಲಿಂಡರ್‌ಗಳು
* ಪ್ರತಿ ಕ್ವಿಂಟಲ್ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ 3,100 ರೂ.ಗೆ ಏರಿಕೆ
* ಬೀಜ ಮತ್ತು ರಸಗೊಬ್ಬರ ಖರೀದಿಸಲು ಸಣ್ಣ ರೈತರಿಗೆ 2,500 ರೂ. ಅನುದಾನ