Advertisement

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ

11:12 AM Apr 10, 2019 | Lakshmi GovindaRaju |

ದೇವನಹಳ್ಳಿ: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹಲವು ಜನಪರ ಯೋಜನೆಗಳು ಜಾರಿಯಾಗುತ್ತವೆ. ಡಾ.ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಜಿಪಂ ಸದಸ್ಯ ಲಕ್ಷ್ಮೀನಾರಾಯಣ್‌ ತಿಳಿಸಿದರು.

Advertisement

ತಾಲೂಕಿನ ಐಬಸಾಪುರ ಗ್ರಾಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಪರ ಮತಯಾಚನೆ ಮಾಡಿ ಮಾತನಾಡಿದರು.

ಮೂಲ ಸೌಕರ್ಯಗಳಿಗೆ ಹೆಚ್ಚು ಆದ್ಯತೆ: ವೀರಪ್ಪ ಮೊಯ್ಲಿ ಕಳೆದ 10 ವರ್ಷಗಳಿಂದ ಸಂಸದರಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಉತ್ತಮವಾಗಿ ಶ್ರಮಿಸಿದ್ದಾರೆ. ಬಯಲು ಸೀಮೆ ಪ್ರದೇಶಗಳಿಗೆ ಶಾಶ್ವತ ಕುಡಿಯುವ ನೀರನ್ನು ಕಲ್ಪಿಸುವ ನಿಟ್ಟಿನಲ್ಲಿ ಎತ್ತಿನ ಹೊಳೆ ಯೋಜನೆಯನ್ನು ತರಲೇಬೇಕೆಂಬ ಉದ್ದೇಶದಿಂದ ಸಾಕಷ್ಟು ಶ್ರಮಿಸಿದ್ದಾರೆ.

ಅಲ್ಲದೇ, ಸಂಸದರ ನಿಧಿಯಿಂದ ಚನ್ನರಾಯಪಟ್ಟಣ ಹೋಬಳಿಯಲ್ಲಿ ಶಾಲಾ ಕಟ್ಟಡಗಳಿಗೆ ಅನುದಾನ ಸೇರಿದಂತೆ ಇನ್ನೂ ಮುಂತಾದ ಮೂಲ ಸೌಕರ್ಯಗಳಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

ಮೊಯ್ಲಿ ಗೆಲ್ಲಿಸಿ: ರಾಜ್ಯ ಮಹಿಳಾ ಕಾಂಗ್ರೆಸ್‌ ಕಾರ್ಯದರ್ಶಿ ಅಕ್ಕಯಮ್ಮ ಮುನಿಯಪ್ಪ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ 5 ವರ್ಷಗಳ ಕಾಲ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದೆ. ಅಲ್ಲದೇ, ಹತ್ತು ಹಲವಾರು ಭಾಗ್ಯಗಳ ಮುಖಾಂತರ ಸುಭದ್ರ ಹಾಗೂ ಉತ್ತಮ ಸರ್ಕಾರ ನಡೆಸಿದ್ದಾರೆ.

Advertisement

ಕೇಂದ್ರದಲ್ಲಿ ಮನಮೋಹನ್‌ಸಿಂಗ್‌ ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಮುಖಾಂತರ ಗ್ರಾಮ ಪಂಚಾಯಿತಿಗಳಿಗೆ ಕೋಟಿ ಕೋಟಿ ರೂ. ಅನುದಾನ ನೀಡಿದ್ದು ಹಳ್ಳಿಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ.

ಆದ್ದರಿಂದ, ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರು ಹಾಗೂ ಬಡವರ ಪರ ಯೋಜನೆಗಳನ್ನು ನೀಡಿ ದೇಶವನ್ನು ಅಭಿವೃದ್ಧಿ ಕಡೆ ಕೊಂಡೊಯ್ಯಲು ಅನುಕೂಲವಾಗುತ್ತದೆ. ವೀರಪ್ಪ ಮೊಯ್ಲಿ ಅವರಿಗೆ ಮತ ನೀಡಿದರೆ ಕಾಂಗ್ರೆಸ್‌ ಸರ್ಕಾರ ರಚನೆಯಾಗುತ್ತದೆ ಕೇಂದ್ರದಲ್ಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಲೋಕೇಶ್‌, ತಾಪಂ ಮಾಜಿ ಸದಸ್ಯ ಲಕ್ಷ್ಮಣ್‌ ಗೌಡ, ಕಿಸಾನ್‌ ಕೇತ್‌ ಮಜ್ದೂರ್‌ ಅಧ್ಯಕ್ಷ ಬೈರೇಗೌಡ, ವಿಜಯಪುರ ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ರಾಮಚಂದ್ರಪ್ಪ, ತಾಪಂ ಸದಸ್ಯ ವೆಂಕಟೇಶ್‌, ವಿಎಸ್‌ಎಸ್‌ಎನ್‌ ಅಧ್ಯಕ್ಷ ಬಾಬು, ನಲ್ಲೂರು ವಿಎಸ್‌ಎಸ್‌ಎನ್‌ ಮಾಜಿ ಅಧ್ಯಕ್ಷ ಲಲಿತೇಶ್‌,

ನಲ್ಲೂರು ಗ್ರಾಪಂ ಉಪಾಧ್ಯಕ್ಷ ನವೀನ್‌, ಸದಸ್ಯರಾದ ಮಂಜುನಾಥ್‌, ಮಹದೇವಿ ವೀರಭದ್ರಪ್ಪ, ಕೃಷ್ಣಪ್ಪ, ಮುಖಂಡರಾದ ಚನ್ನ ಕೃಷ್ಣಪ್ಪ ಚನ್ನರಾಯಪಟ್ಟಣ ಗ್ರಾಪಂ ಸದಸ್ಯರಾದ ಕೇಶವಮೂರ್ತಿ, ನಾರಾಯಣಸ್ವಾಮಿ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next