Advertisement
ನಾಡಹಬ್ಬ ದಸರಾ ಮಹೋತ್ಸವಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಹುತಾತ್ಮ ಯೋಧರಿಗೆ ಸಿಗುವ ಗೌರವ ಕೋವಿಡ್ ವಾರಿಯರ್ಸ್ ಮೃತರಾದರೆ ಅವರಿಗೂ ಸಿಗಬೇಕು ಎಂದು ತಿಳಿಸಿದರು.
Related Articles
Advertisement
ದಸರಾ ಉದ್ಘಾಟಿಸಿದ್ದು ನನ್ನ ಜೀವಿತಾವಧಿಯ ದೊಡ್ಡ ಗೌರವ. ಕೋವಿಡ್-19 ವಾರಿಯರ್ಸ್ ಅಭಿನಂದನೆಯು ವೈದ್ಯ ಸಮುದಾಯಕ್ಕೆ ಕೊಟ್ಟ ದೊಡ್ಡ ಗೌರವ ಎಂದು ಸ್ಮರಿಸಿದರು.
ಕೋವಿಡ್ ಗೆ ಈ ವರ್ಷ ಲಸಿಕೆ ಬರುವ ಲಕ್ಷಣಗಳಿಲ್ಲ. ಮುಂದಿನ ವರ್ಷದ ಫೆಬ್ರವರಿ, ಮಾರ್ಚ್‌ನಲ್ಲಿ ಲಸಿಕೆ ಬರಬಹುದು. ಕೋವಿಡ್-19 ಪಾಸಿಟಿವ್ ಬಂದರೆ ಅವರನ್ನು ಅಸ್ಪೃಶ್ಯರ ರೀತಿ ನೋಡಬೇಡಿ. ವೈದ್ಯರೇ ರೋಗಿಗಳಾಗುತ್ತಿದ್ದಾರೆ, ವೈದ್ಯರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ವೈದ್ಯರ ಮೇಲೆ ಹಲ್ಲೆ ಮಾಡುವುದು, ಆಸ್ಪತ್ರೆಗಳ ಮೇಲೆ ದಾಳಿ ಮಾಡುವುದು ನಿಲ್ಲಿಸಬೇಕು. ವೈದ್ಯರಿಗೆ ಗ್ರಾಮೀಣ ಭಾಗದಲ್ಲಿ ರಕ್ಷಣೆ ಸಿಗುತ್ತಿಲ್ಲ. ಹೀಗಾಗಿ, ವೈದ್ಯರು ಗ್ರಾಮೀಣ ಭಾಗಕ್ಕೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರಲ್ಲದೇ, ಗ್ರಾಮೀಣ ಭಾಗದ ಆಸ್ಪತ್ರೆಗಳನ್ನು ಜಿಲ್ಲಾ ಪಂಚಾಯತ್ ವ್ಯಾಪ್ತಿಯಿಂದ ಹೊರಗಿಟ್ಟು ಜಿಲ್ಲಾ ಕೇಂದ್ರದಿಂದ ನಿರ್ವಹಣೆ ಮಾಡಿಸಬೇಕು ಎಂದು ಆಗ್ರಹಿಸಿದರು.
ಜಯದೇವ ಆಸ್ಪತ್ರೆಯಲ್ಲಿ ಈವರೆಗೆ 50 ಲಕ್ಷ ಜನರಿಗೆ ಚಿಕಿತ್ಸೆ ಕೊಟ್ಟಿದ್ದೇವೆ. 5 ಲಕ್ಷ ಜನರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದೇವೆ ಎಂದರು. ಸಾಮಾಜಿಕ ಜಾಲತಾಣಗಳು ಸಮಾಜ ಕಟ್ಟಬೇಕಿತ್ತು. ಆದರೆ, ಅವು ಸಮಾಜವನ್ನು ತಪ್ಪು ದಾರಿಗೆ ತಳ್ಳುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.